ಸುಳ್ಯ ತಾಲೂಕಿನ ಅಮರಮಡ್ನೂರು ಗ್ರಾಮದ ಕುಕ್ಕುಜಡ್ಕದಲ್ಲಿರುವ ಚೊಕ್ಕಾಡಿ ವಿದ್ಯಾಸಂಸ್ಥೆಗಳ 54 ನೇ ವರ್ಷದ ಸ್ಥಾಪನಾ ದಿನಾಚರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು. 14 ರಂದು ಶಾಲಾ ಸಭಾಭವನದಲ್ಲಿ ನಡೆಯಿತು.
ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಇದರ ಅಧ್ಯಕ್ಷರಾದ ನಿರಂಜನ್ ಕೊಡ್ತುಗುಳಿ ಯವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪಂಜ ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಡೀನ್ ವಿಜಯ ಸರಸ್ವತಿ ಬಿ, ಸುಳ್ಯಕ್ಷೇತ್ರ ಶಿಕ್ಷಣಾಧಿಕಾರಿ ವೈ .ಎಸ್. ಹರಗಿ, ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ ಸುಪ್ರೀತ್ ಮೋಂಟಡ್ಕ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಲಕ್ಷ್ಮೀಶ ಚೊಕ್ಕಾಡಿಯವರ 3ನೇಯ ಕವನ ಸಂಕಲನ ನುಡಿ ಗಿಡಿದ ಮೌನವನ್ನು ಕ್ಷೇತ್ರಶಿಕ್ಷಣಾಧಿಕಾರಿಯವರು ಬಿಡುಗಡೆಗೊಳಿಸಿದರು. ಕಳೆದ
ಶೈಕ್ಷಣಿಕ ವರ್ಷದ ಎಸ್ .ಎಸ್. ಎಲ್. ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಹಾಗೂಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಸ್ಕಾಲರ್ ಶಿಪ್ ಗೆ ಆಯ್ಕೆಯಾದ ಕು.ಪ್ರೇಕ್ಷಾ ಪಿ.ಜೆಯವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ 75 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ನಿವೃತ್ತ ಶಿಕ್ಷಕರು, ಹಿರಿಯ ಸಾಹಿತಿಗಳಾದ ಲಕ್ಷ್ಮೀಶ ಚೊಕ್ಕಾಡಿ ಯವರನ್ನು ಸಂಸ್ಥೆಯ ವತಿಯಿಂದ ಗೌರವಿಸಿ ಶುಭ ಹಾರೈಸಲಾಯಿತು.
ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಖಜಾಂಜಿ ಜಗನ್ನಾಥ ಹಿರಿಯಡ್ಕ, ನಿರ್ದೇಶಕರಾದ ಆನಂದ ಚಿಲ್ಪಾರು,
ಚೊಕ್ಕಾಡಿ ಎಜ್ಜುಕೇಶನ್ ಸೊಸೈಟಿಯಕಾರ್ಯದರ್ಶಿ ತೇಜಸ್ವಿ ಕಡಪಳ
ನಿರ್ದೇಶಕರಾದ ಆನಂದ ಚಿಲ್ಪಾರು, ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಸಂಕೀರ್ಣ ಚೊಕ್ಕಾಡಿ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಭವ್ಯ .ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಯಕಾರ್ಯದರ್ಶಿ ತೇಜಸ್ವಿ ಕಡಪಳರವರು ಪ್ರಾಸ್ತಾವಿಕಮಾತಿನೊಂದಿಗೆ ಸ್ವಾಗತಿಸಿದರು. ಜತೆಕಾರ್ಯದರ್ಶಿ ತಿಮ್ಮಪ್ಪ ಗೌಡ ಕೊಂಡೆಬಾಯಿ ವಂದಿಸಿದರು. ಶಿಕ್ಷಕಿ ಸಂಧ್ಯಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಎಲ್ಲಾ ಸದಸ್ಯರು, ಚೊಕ್ಕಾಡಿ ಪ್ರೌಢಶಾಲೆಯ ಹಿರಿಯ ಶಿಕ್ಷಕರು, ವಿದ್ಯಾಭಿಮಾನಿಗಳು, ಪೋಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು.




































































