ಬಂಟ್ವಾಳದಲ್ಲಿ ಯುವತಿಯ ಕೊಲೆ ಮಾಡಿರುವುದು ಹೇಯ ಮತ್ತು ಅವಮಾನೀಯ ಕೃತ್ಯ : ಶಾಸಕಿ ಭಾಗೀರಥಿ ಮುರುಳ್ಯ

ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಕೊಲೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಮುರುಳ್ಯ ತೀವ್ರವಾಗಿ ಖಂಡಿಸಿ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.
​ಬಂಟ್ವಾಳದಲ್ಲಿ ಯುವತಿಯೊಬ್ಬಳನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಘಟನೆಯು ಇಡೀ ಸಮಾಜವೇ ತಲೆತಗ್ಗಿಸುವಂತಹದ್ದಾಗಿದೆ. ಈ ಅಮಾನವೀಯ ಮತ್ತು ರಕ್ಕಸ ಕೃತ್ಯವನ್ನು ನಾನು ತೀವ್ರ ಪದಗಳಲ್ಲಿ ಖಂಡಿಸುತ್ತೇನೆ.
​ನಾಗರಿಕ ಸಮಾಜದಲ್ಲಿ ಇಂತಹ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಇಂತಹ ಘಟನೆ ನಡೆದಿರುವುದು ಮಹಿಳೆಯರ ಮತ್ತು ಯುವತಿಯರ ಸುರಕ್ಷತೆಯ ಬಗ್ಗೆ ತೀವ್ರ ಆತಂಕವನ್ನು ಮೂಡಿಸಿದೆ. ಕಾನೂನಿನ ಭಯವಿಲ್ಲದೆ ಇಂತಹ ಧೈರ್ಯ ತೋರುವ ಅಪರಾಧಿಗಳಿಗೆ ಸಮಾಜದಲ್ಲಿ ಕಠಿಣ ಸಂದೇಶ ರವಾನೆಯಾಗಬೇಕಿದೆ.
​ಇಂತಹ ಕೃತ್ಯಗಳು ಮರುಕಳಿಸದಂತೆ ಸರಕಾರ ಮತ್ತು ಗೃಹ ಇಲಾಖೆ ಈ ಘಟನೆಯನ್ನು ಗಂಭಿರವಾಗಿ ಪರಿಗಣಿಸ ಬೇಕು,ಪೊಲೀಸ್ ಇಲಾಖೆಯು ಈ ಪ್ರಕರಣವನ್ನು ಯಾವುದೇ ವಿಳಂಬವಿಲ್ಲದೆ ತ್ವರಿತವಾಗಿ ತನಿಖೆ ಪೂರ್ಣಗೊಳಿಸಬೇಕು.
​ಇಂತಹ ಘೋರ ಅಪರಾಧ ಎಸಗಿದ ಆರೋಪಿಗೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣಾತಿಕಠಿಣ ಶಿಕ್ಷೆಯಾಗುವಂತೆ ನ್ಯಾಯಾಲಯದಲ್ಲಿ ಗಟ್ಟಿ ಕಾನೂನು ಹೋರಾಟ ರೂಪಿಸಬೇಕು.
​ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ರಕ್ಷಣೆ ಹಾಗೂ ಸುರಕ್ಷತೆಗೆ ಕಾನೂನು ಸುವ್ಯವಸ್ಥೆ ಇಲಾಖೆಯು ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು.
​ಮೃತ ಯುವತಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅವಳ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇವೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನನ್ನ ಬೆಂಬಲ ಇರಲಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

































































































































Leave a Comment

Your email address will not be published. Required fields are marked *

error: Content is protected !!
Scroll to Top