ಡಾ. ಅನುರಾಧ ಕುರುಂಜಿಯವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026

ಸುಳ್ಯ : ಶಿಕ್ಷಣ ಕ್ಷೇತ್ರ, ಸಾಹಿತ್ಯ ಸಮಾಜಸೇವೆ ಹಾಗೂ ಸಂಘಟನೆಯಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಗಾಗಿ ಶಿಕ್ಷಣ ತಜ್ಞೆ, ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ, ಸಾಹಿತಿ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಅನುರಾಧ ಕುರುಂಜಿ ಅವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026” ಘೋಷಿಸಲಾಗಿದೆ.

































































































































ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರ ಸಂಚಾಲಕತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಭವನ ಮತ್ತು ಗ್ರಂಥಾಲಯ ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ.

ಮೂಲತಃ ಕುರುಂಜಿ ಮನೆತನದವರಾದ ಡಾ. ಅನುರಾಧ ಕುರುಂಜಿ ಅವರು ವೃತ್ತಿಯಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದು, ಪ್ರವೃತ್ತಿಯಲ್ಲಿ ತರಬೇತುದಾರರು, ಸಮಾಜಸೇವಕಿ, ಸಂಘಟಕಿ, ಕವಯತ್ರಿ, ಲೇಖಕಿ ಹಾಗೂ ಹಲವು ಕೃತಿಗಳ ರಚನೆಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ 3600 ಕ್ಕೂ ಮಿಕ್ಕಿ ತರಬೇತಿಗಳನ್ನು ನೀಡಿದುದಲ್ಲದೇ ಶಿಕ್ಷಣ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜುಲೈ 26ರಂದು ನಡೆಯಲಿರುವ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ವೇದಿಕೆಯಲ್ಲಿ ಡಾ. ಅನುರಾಧ ಕುರುಂಜಿಯವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

error: Content is protected !!
Scroll to Top