ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ, 85 ವರ್ಷದ ಚೆನ್ನಮ್ಮ ಅವರು ಜುಲೈ 18ರಂದು ನಿಧನರಾಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜುಲೈ 15ರಿಂದ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. 1954ರ ಮೇ 25ರಂದು ದೇವೇಗೌಡರೊಂದಿಗೆ ವಿವಾಹವಾಗಿದ್ದ ಚನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾದಾಗ ತಜ್ಞ ವೈದ್ಯ ಡಾ.ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ




































































