July 21, 2026

ಅರಂತೋಡು ಎರಡನೇ ವಾರ್ಡ್ ನಲ್ಲಿ ವೇಗ ಪಡೆದುಕೊಂಡ ಎಸ್.ಐ.ಆರ್ ಪ್ರಕಿಯೆ

ಅರಂತೋಡು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಎಸ್.ಐ.ಆರ್ ಪ್ರಕಿಯೆ ಬಿರುಸುನಿಂದ ಸಾಗುತ್ತಿದ್ದು ಅರಂತೋಡು ಎರಡನೇ ವಾರ್ಡಿನಲ್ಲಿ ಎಸ್.ಐ.ಆರ್ ಪ್ರಕಿಯೆ ಶೇ.97ರಷ್ಟು ಪೂರ್ಣಗೊಂಡಿದೆ ಎಂದು ತಿಳಿದು ಬಂದಿದೆ.ಬಿ.ಎಲ್.ಒ ಹೊನ್ನಮ್ಮ,ಬಿ.ಎಲ್.ಎ ಬಾಲಕೃಷ್ಣ ರೈಎರಡನೇ ವಾರ್ಡಿನಲ್ಲಿ ಸಹಕರಿಸುತ್ತಿದ್ದಾರೆ.

ಅರಂತೋಡು ಎರಡನೇ ವಾರ್ಡ್ ನಲ್ಲಿ ವೇಗ ಪಡೆದುಕೊಂಡ ಎಸ್.ಐ.ಆರ್ ಪ್ರಕಿಯೆ Read More »

ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ:ಸಂಸದ ಕ್ಯಾ.ಚೌಟ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು-ಬಿಕರ್ನಕಟ್ಟೆಯವರೆಗಿನ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಇದೀಗ ಬನ್ನಡ್ಕ ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಸೇರಿದಂತೆ 5.83 ಕೋಟಿ ರೂ. ವೆಚ್ಚದ ಇತರ ಕಾಮಗಾರಿಗಳಿಗೆ ಹೆದ್ದಾರಿ ಪ್ರಾಧಿಕಾರವು ತಾತ್ವಿಕ ಅನುಮೋದನೆ ನೀಡಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಸ್ಥಳೀಯ ನಿವಾಸಿಗಳು ಹಾಗೂ ಸಂಘ-ಸಂಸ್ಥೆಗಳ ಮನವಿಗೆ ಸ್ಪಂದಿಸಿ, ಬನ್ನಡ್ಕ ಪ್ರದೇಶದಲ್ಲಿ ಕೈಬಿಡಲಾಗಿದ್ದ ಸರ್ವೀಸ್ ರಸ್ತೆ ಹಾಗೂ ವಾಮಂಜೂರು ಜಂಕ್ಷನ್ ಬಳಿ ನೂತನ ಪಾದಚಾರಿ ಮೇಲ್ಸೇತುವೆ (Foot Over Bridge) ನಿರ್ಮಾಣಕ್ಕೆ ಈಗಾಗಲೇ

ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ:ಸಂಸದ ಕ್ಯಾ.ಚೌಟ Read More »

ಸಂಪಾಜೆ : ಕಾರು ಪಲ್ಟಿ ಹೊಡೆದು ಚಾಲಕನಿಗೆ ಗಾಯ

ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕಡೆಪಾಲ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಜು.21 ರಂದು ಸಂಭವಿಸಿದೆ. ಕಲ್ಲುಗುಂಡಿಯಿಂದ ಕಡೆಪಾಲದ ಕಡೆಗೆ ಹೋಗುತ್ತಿದ್ದ ಕಾರು ಕಡೆಪಾಲದ ತಿರುವು ಬಳಿ ತಲುಪಿದಾಗ ಒಮ್ಮಿಂದೊಮ್ಮೆಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಚರಂಡಿಗೆ ಪಲ್ಟಿಯಾಗಿದೆ. ಪರಿಣಾಮವಾಗಿ ಕಾರಿನ ಚಾಲಕ ಗುರುವ ಎಂಬವರಿಗೆ ತಲೆಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಕಾರದಿಂದ ಕಲ್ಲುಗುಂಡಿಯ ತಾಜುದ್ದೀನ್ ಟರ್ಲಿ ಅಂಬುಲೆನ್ಸ್ ಮೂಲಕ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯದ್ದು ಚಿಕಿತ್ಸೆ ಕೊಡಿಸಲಾಗಿದೆ.

ಸಂಪಾಜೆ : ಕಾರು ಪಲ್ಟಿ ಹೊಡೆದು ಚಾಲಕನಿಗೆ ಗಾಯ Read More »

ನಾಳೆ (ಜು.22): ಸುಳ್ಯದಲ್ಲಿ ಕೆಜೆಯು ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿಕೂಟ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿಕೂಟ ಸುಳ್ಯದ ರಂಗಮಯೂರಿ ಕಲಾಶಾಲೆಯಲ್ಲಿ ಜು. 22 ರಂದು ನಡೆಯಲಿರುವುದು. ಶಾಸಕಿ ಕು.ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ನಿವೃತ್ತ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ ಆಟಿ ಮತ್ತು ಪತ್ರಿಕಾ ದಿನದ ಕುರಿತು ವಿಶೇಷ ಉಪನ್ಯಾಸ ಮಾಡಲಿರುವರು.ಕೆಜೆಯು ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಯಶ್ವಿತ್ ಕಾಳಂಮನೆ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕ ಅಶೋಕ್ ಪ್ರಭು, ಕೆಜೆಯು ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ರಂಗಮಯೂರಿ ಕಲಾ

ನಾಳೆ (ಜು.22): ಸುಳ್ಯದಲ್ಲಿ ಕೆಜೆಯು ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿಕೂಟ Read More »

error: Content is protected !!
Scroll to Top