ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಕಾರಣ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜು.25ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಆರಂಭವಾದ ಅಭಿಯಾನದಲ್ಲಿ ಪ್ರಧಾನ್ ಅವರ ರಾಜೀನಾಮೆ ನೀಡಬೇಕೆಂಬ ಕೂಗು ಪ್ರಬಲವಾಗಿ ಕೇಳಿ ಬಂದಿತ್ತು.
ಈ ಪರಿಸ್ಥಿತಿಯ ಲಾಭವನ್ನು ಜಂತರ್ ಮಂತರ್ ಹಾಗೂ ದೇಶದಾದ್ಯಂತ ಇರುವ ರಾಷ್ಟ್ರವಿರೋಧಿ ಶಕ್ತಿಗಳು ಪಡೆಯದಂತೆ ನೋಡಿಕೊಳ್ಳಲು, ದೇಶದ ಏಕತೆ ಕಾಪಾಡಲು, ಭಾರತದ ವಿದ್ಯಾರ್ಥಿಗಳು ಕಾನೂನು ತೊಡಕುಗಳಲ್ಲಿ ಸಿಲುಕದೆ ತಮ್ಮ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನದತ್ತ ಗಮನಹರಿಸಲು, ನಾನು ಪ್ರಧಾನಮಂತ್ರಿಯವರಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ” ಎಂದು ಪ್ರಧಾನ್ ಅವರು ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ




















