ಮೈಸೂರಿನಲ್ಲಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಅಜ್ಜಾವರ ಗ್ರಾಮದ ಕಾಂತಮಂಗಲದ ಯುವಜನೋರ್ವ ಮ್ರತಪಟ್ಟ ಘಟನೆ ವರದಿಯಾಗಿದೆ.
ಮ್ರತಪಟ್ಟ ಯುವಕನನ್ನು ನಿಕೇಶ್ ಎಂದು ಗುರುತಿಸಲಾಗಿದೆ.
ಜು.24ರಂದು ಮೈಸೂರಿನಲ್ಲಿ ಬೈಕ್ ಅಪಘಾತಕ್ಕೊಳಗಾಗಿದ್ದು ಗಂಭೀರ ಗಾಯಗೊಂಡ ನಿಕೇಶ್ ರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಜು.26ರಂದು ಮುಂಜಾನೆ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ನಿಕೇಶ್ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ಕಾಂತಮಂಗಲದ ಮನೆಗೆ ಬರುತ್ತಿರುವ ವೇಳೆ ಈ ಘಟನೆ ನಡೆದಿದೆ
ಮೃತರು ತಂದೆ ಜಗದೀಶ್, ತಾಯಿ ಉಷಾ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಕಾಂತಮಂಗಲದ ಯುವಕ ಮೈಸೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಸಾವು





































































