ಕಡಬ ತಾಲ್ಲೂಕಿನ ಕುಂತೂರು ನಿವಾಸಿ ಯಾದವ ಗೌಡ ಕೇವಳ ಅವರು ಕೃಷಿ ಕೆಲಸದಲ್ಲಿ ತೊಡಗಿಕೊಂಡಿರುವ ಸಂದರ್ಭ ಆಡಿಕೆ ಮರ ಬಿದ್ದು ಮೃತ ಪಟ್ಟಿದ್ದರು ಅವರ ಮನೆಗೆ ಮಾನ್ಯ ಶಾಸಕರು ಭೇಟಿ ನೀಡಿ ಸಾಂತ್ವನ ತಿಳಿಸಿ ಸರಕಾರದ ಪ್ರಾಕೃತಿಕ ವಿಕೋಪದಿಂದ ಜೀವ ಹಾನಿಯಾದ ಪರಿಹಾರ ಮೊತ್ತ 5ಲಕ್ಷವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಮಂಡಲ ಪ್ರಧಾನಕಾರ್ಯದರ್ಶಿ ಪ್ರದೀಪ್ ರೈ,ಜಿಲ್ಲಾ ಉಪಾಧ್ಯಕ್ಷ ರಾಕೇಶ ರೈ,SC ಮೊರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಿ ಎಲ್ತಿಮಾರ್,ಮಹಾ ಶಕ್ತಿ ಕೇಂದ್ರ ಪ್ರಮುಖ್ ಸುರೇಶ ದೇಂತಾರು, ಕೊಯಿಲಾ ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ರವಿಪ್ರಸಾದ್ ಶೆಟ್ಟಿ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ಕುಂತೂರು ಶಕ್ತಿ ಕೇಂದ್ರ ಪ್ರಮುಖ್ ಸುಭಿಕ್ಷ,ತಾ.ಪಂ ಮಾಜಿ ಉಪಾಧ್ಯಕ್ಷೆ ಲಲಿತಾ ಈಶ್ವರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಡಬ : ಅಡಿಕೆ ಮರದಿಂದ ಬಿದ್ದು ಮೃತ ಪಟ್ಟ ಕುಟುಂಬಕ್ಕೆ ರೂ 5 ಲಕ್ಷ ಪರಿಹಾರ ವಿತರಣೆ













