“ತೋಟಗಾರಿಕಾ ಬೆಳೆಗಳನ್ನು ಬೆಳೆದ ರೈತರು ಹವಾಮಾನ
ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2026-27ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮುಗಳಿಗೆ
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ನೋಂದಣಿಯ ಅಂತಿಮ ದಿನಾಂಕವನ್ನು ಆ.17 ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ಜಿಲ್ಲಾ ತೋಟಗಾರಿಕಾ ಜಂಟಿ ನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿರುತ್ತದೆ. ಸದರಿ ಯೋಜನೆಯ ಅಡಿಯಲ್ಲಿ ಸಾಲ ಪಡೆದ/ಪಡೆಯದ ರೈತರು ನೋಂದಾವಣೆಗೊಳ್ಳಲು
ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ನೋಂದಾವಣೆಗೊಳ್ಳದ ರೈತರು ತುರ್ತಾಗಿ ಸದರಿ ಯೋಜನೆಯಡಿ ನೋಂದಾವಣೆಗೊಂಡು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬಹುದೆಂದು ತಿಳಿಸಲಾಗಿದೆ
ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ನೋಂದಣಿಯ ಅವಧಿ ವಿಸ್ತರಣೆ













