ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಿಶ್ವ ಆನೆ ದಿನಾಚರಣೆ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆ.12 2026 ರಂದು ಕರ್ನಾಟಕ ಅರಣ್ಯ ಇಲಾಖೆ ಸುಬ್ರಮಣ್ಯ ಉಪವಿಭಾಗ, ಮಂಗಳೂರು ವಿಭಾಗ ವತಿಯಿಂದ ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ವಿಶ್ವ ಆನೆ ದಿನಾಚರಣೆಯನ್ನು ಆಚರಿಸಲಾಯಿತು.





















ಕಾರ್ಯಕ್ರಮದ ಅಧ್ಯಕ್ಷರಾದ ಕು. ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ, ಆನೆಗಳಿಂದ ತಾಲೂಕಿನಲ್ಲಿ ಉಂಟಾಗುವ ಸಮಸ್ಯೆಗಳನ್ನು ಹಾಗೂ ಇದಕ್ಕೆ ತಕ್ಕ ಪರಿಹಾರವಾಗಬೇಕು ಎಂದು ತಿಳಿಸುತ್ತಾ ಅಧ್ಯಕ್ಷೀಯ ಮಾತುಗಳನ್ನಾಡಿದರು.

ಈ ಸಂಧರ್ಭದಲ್ಲಿ ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ರಚಿಸಲ್ಪಟ್ಟ ಕೃತಿ – “ಆನೆಗಳ ಲೋಕ” ಮಾನವ ಆನೆ ಸಹಬಾಳ್ವೆಯ ಬಗ್ಗೆ ಒಂದು ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.

ನಂತರ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕಾಲೇಜಿನ ಆಗದ ತಂತ್ರ ವಿಭಾದ ಮುಖ್ಯಸ್ಥರಾದ ಡಾ ಅವಿನಾಶ್ ಕೆ ವಿ ಇವರು ಆನೆಗಳ ಜೀವ ಶೈಲಿ, ಅವುಗಳ ಸಂರಕ್ಷಣೆಯ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡಿದರು.

ಕಾರ್ಯಕ್ರಮಕ್ಕೆ ಶುಭ ಹಾರೈಸುತ್ತಾ ಸುಳ್ಯ ನಗರ ಯೋಜನೆ ಪ್ರಾಧಿಕಾರ ಅಧ್ಯಕ್ಷರಾದ ಕೆ ಎಂ ಮುಸ್ತಫ ಎರಡು ಮಾತುಗಳನ್ನಾಡಿದರು.

ಈ ಸಂಧರ್ಭದಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷ ನಿಯಂತ್ರಿಸುವ ಸಲುವಾಗಿ ಸಹಾಯ ಮಾಡಿದ ಗೌರವಾನ್ವಿತರಿಗೆ ಹಾಗೂ ಅಥಿತಿ ಉಪನ್ಯಾಸಕರಿಗೆ ಸನ್ಮಾನಿಸಲಾಯಿತು.

ತದನಂತರ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಸಂವಾದ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ದಕ್ಷಿಣ ಕನ್ನಡ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ರವಿಶಂಕರ್, , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆದ ಶ್ರೀ ಪ್ರಶಾಂತ್ ಕುಮಾರ್ ಪೈ, ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ ವಿ.

ಕಾರ್ಯಕ್ರಮವನ್ನು ವಲಯ ಅರಣ್ಯಾಧಿಕಾರಿಯಾದ ಶ್ರೀ ಮಂಜುನಾಥ್ ರವರು ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿಗಳಾದ ರಾಹುಲ್ ಮತ್ತು ಬಳಗದವರು ಪ್ರಾರ್ಥಿಸಿ, ವಲಯ ಅರಣ್ಯಾಧಿಕಾರಿಯಾದ ಶ್ರೀ ನಿರಂಜನ್ ಶೆಟ್ಟಿ, ಕಾಲೇಜಿನ ಆಗದ ತಂತ್ರ ವಿಭಾಗದ ಪ್ರಾಧ್ಯಾಪಕಿಯಾದ ಡಾ ಧನ್ಯ ಬೈಲಾಡಿ ನಿರೂಪಿಸಿದರು.

ಈ ಸಂಧರ್ಭದಲ್ಲಿ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಪದವಿ ವಿದ್ಯಾರ್ಥಿಗಳು, ತಾಲೂಕಿನ ರೈತರುಗಳು ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳು ಉಪಸ್ತಿತರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top