80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಅಂಗವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ 60 ಸಾವಿರ ಲಡ್ಡು ವಿತರಣೆ

80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಅಂಗವಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸುಳ್ಯ ಹಾಗೂ ಕಡಬ ತಾಲೂಕಿನ 161 ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಹಾಗೂ ಸುಳ್ಯ ಮತ್ತು ಕಡಬ ತಾಲೂಕು ಪಂಚಾಯತ್‌ಗಳು ಮತ್ತು ಕಡಬ ಪಟ್ಟಣ ಪಂಚಾಯತ್‌ಗೆ ಸುಮಾರು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ 60 ಸಾವಿರ ಲಡ್ಡು ಪ್ರಸಾದವನ್ನು ವಿತರಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗೆ ಶ್ರೀ ಕ್ಷೇತ್ರದ ಪ್ರಸಾದ ತಲುಪಿಸುವ ಉದ್ದೇಶದಿಂದ ದೇವಳದ ವತಿಯಿಂದ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಇದಲ್ಲದೆ, ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೂ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟದ ಸಂದರ್ಭದಲ್ಲಿ ಶ್ರೀ ದೇವರ ಲಡ್ಡು ಪ್ರಸಾದವನ್ನು ವಿತರಿಸಲಾಗುವುದು ಎಂದು ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುoಡಿ ತಿಳಿಸಿದ್ದಾರೆ.
ಲಾಡು ಪ್ರಸಾದವನ್ನು ಆದಿ ಸುಬ್ರಹ್ಮಣ್ಯದಲ್ಲಿ ತಯಾರಿಸಲಾಗುತ್ತಿದ್ದು, ಪ್ರಸಾದ ವಿತರಣೆಯ ವ್ಯವಸ್ಥೆಯಲ್ಲಿ ದೇವಳದ ಸಿಬ್ಬಂದಿ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಜಿತ್ ಕುಮಾ‌ರ್, ಪ್ರವೀಣ್ ಮರವಂಜೆ ಮತ್ತು ಸೌಮ್ಯ ಉಪಸ್ಥಿತರಿದ್ದರು.





















Leave a Comment

Your email address will not be published. Required fields are marked *

error: Content is protected !!
Scroll to Top