ಬಾಳಿಲ : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿಂತಿಕಲ್ಲು ವಲಯ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿಂತಿ ಕಲ್ಲು ವಲಯ,ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲದ ಶಾಲಾ ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು.
ಜನಜಾಗೃತಿ ವೇದಿಕೆ ನಿಂತಿ ಕಲ್ಲು ವಲಯದ ಸದಸ್ಯರಾದ ಕೂಸಪ್ಪ ಗೌಡ ಮುಗಪ್ಪು ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಜನಜಾಗೃತಿ ಕಾರ್ಯಕ್ರಮ ಮತ್ತು ದುಶ್ಚಟ ಮುಕ್ತ ಸಮಾಜದಲ್ಲಿ ಮಕ್ಕಳು ಉತ್ತಮ ಪ್ರಜೆಗಳಾಗಿ.ದೇಶ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಹೇಳಿದರು.
ಶಾಲಾ ಮುಖ್ಯ ಗುರುಗಳಾದ ಉದಯಕುಮಾರ್ ರೈಯವರು ಅಧ್ಯಕ್ಷತೆಯನ್ನು ವಹಿಸಿ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉತ್ತಮ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವಲಯ ಮೇಲ್ವಿಚಾರಕಿ ಸವಿತಾ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿಕ್ಷಕರಾದ ಲೋಕೇಶ್ ರವರು ಧನ್ಯವಾದ ಸಮರ್ಪಿಸಿದರು..
ಕಲ್ಮಡ್ಕ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ರತ್ನಾವತಿ ಹಾಗೂ ಇತರರು ಉಪಸ್ಥಿತರಿದ್ದರು.





















Leave a Comment

Your email address will not be published. Required fields are marked *

error: Content is protected !!
Scroll to Top