August 15, 2026

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 80ನೇ ಸ್ವಾತಂತ್ರ್ಯ ದಿನ ಆಚರಣೆ

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಯು.ಕೆ. ಧ್ವಜಾರೋಹಣ ನೆರವೇರಿಸಿದರು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಲಕ್ಷ್ಮೀಷ ಗಬ್ಲಡ್ಕ,ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪಿ.ಬಿ.ದಿವಾಕರ ರೈ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು,ನಿಕಟ ಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು, ಅರ್ಚಕ ಹಾಗೂ ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 80ನೇ ಸ್ವಾತಂತ್ರ್ಯ ದಿನ ಆಚರಣೆ Read More »

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನ ಆಚರಣೆ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.ರೆಡ್ ಕ್ರಾಸ್, ಸುಳ್ಯ ಘಟಕದ ಅಧ್ಯಕ್ಷರಾದ ಪಿ.ಬಿ.ಸುಧಾಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.ವೇದಿಕೆಯಲ್ಲಿ ಅಂಜಲಿ ಶಾಲೆಯ ಅಧ್ಯಕ್ಷರಾದ ಶುಭಕರ ಬಿ.ಸಿ., ಸಂಚಾಲಕಿ ಗೀತಾಂಜಲಿ ಟಿ.ಜಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸ್ವಾತಂತ್ರ್ಯ ಹೋರಾಟಗಾರರ ವೇಷ ಧರಿಸಿದ ಚಿಕ್ಕಮಕ್ಕಳು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರನ್ನು ಚಿತ್ರಿಸುವ ಮೂಲಕ ಈ ಆಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ಭಾಷಣಗಳು ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಡೆದವು. . ಫಬಿದಾ, ಕಾರ್ಯಕ್ರಮ ನಿರೂಪಿಸಿದರು. ಸಂಗೀತಾ ಸ್ವಾತಂತ್ರ್ಯ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನ ಆಚರಣೆ Read More »

ಸಂಪಾಜೆ : ಕಾರು ರಸ್ತೆಯ ತಡೆ ಬೇಲಿಗೆ ಡಿಕ್ಕಿ ಹೊಡೆದು ಜಖಂ

ಕೊಡಗು ಸಂಪಾಜೆ ಶಾಲಾ ಬಳಿ ಫಾರ್ಚೂನರ್ ಕಾರು ರಸ್ತೆಯ ಬದಿಯ ತಡೆ ಬೇಲಿಗೆ ಗುದ್ದಿ ಅಪಘಾತವಾದ ಘಟನೆ ಆ.14 ರಂದು ರಾತ್ರಿ ಸಂಭವಿಸಿದೆ.ಸುಳ್ಯದಿಂದ ಮಡಿಕೇರಿಯತ್ತ ಹೋಗುತ್ತಿದ್ದ ಫಾರ್ಕ್ಚುನರ್ ಕಾರು ಕೊಡಗು ಸಂಪಾಜೆ ಶಾಲಾ ಬಳಿ ತಲುಪುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂ ಗೊಂಡಿದೆ. ಮಾಹಿತಿಯನ್ನು ತಿಳಿದ ಸಂಪಾಜೆ ತಾಜುದ್ದೀನ್ ಟರ್ಲಿ ಹಾಗೂ ರಚನ್ ಸುಳ್ಯಕೋಡಿ ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳೀಯರ

ಸಂಪಾಜೆ : ಕಾರು ರಸ್ತೆಯ ತಡೆ ಬೇಲಿಗೆ ಡಿಕ್ಕಿ ಹೊಡೆದು ಜಖಂ Read More »

error: Content is protected !!
Scroll to Top