ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆಯಲ್ಲಿ ಸಂಭ್ರಮದ 80 ನೇ ಸ್ವಾತಂತ್ರೋತ್ಸವ ಆಚರಣೆ

ಯುವಜನ ಸಂಯುಕ್ತ ಮಂಡಳಿ ರಿ. ಸುಳ್ಯ ಇದರ ಆಶ್ರಯದಲ್ಲಿ ಸ್ಪಂದನ ಗೆಳೆಯರ ಬಳಗ ರಿ. ಅಡ್ತಲೆ ಮತ್ತು ಚಂದನ ಯುವತಿ ಮಂಡಲ ರಿ. ಅಡ್ತಲೆ ಇವರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆಯಲ್ಲಿ 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲೋಹಿತ್ ಮೇಲಡ್ತಲೆ ಅಧ್ಯಕ್ಷತೆ ವಹಿಸಿದ್ದರು. ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರೂ,ಸ್ಪಂದನ ಗೆಳೆಯರ ಬಳಗದ ಅಧ್ಯಕ್ಷರಾದ ವಿನಯ್ ಬೆದ್ರುಪಣೆ,ಚಂದನ ಯುವತಿ ಮಂಡಲದ ಅಧ್ಯಕ್ಷರಾದ ಸರಸ್ವತಿ ಅಡ್ತಲೆ,ಶಾಲಾ ಮುಖ್ಯೋಪಾಧ್ಯಾಯರಾದ ಮುಕುಂದ ಡಿ. ನಿವೃತ್ತ ಶಿಕ್ಷಕರಾದ ಗಣೇಶ್ ಮಾಸ್ತರ್ ಅಡ್ತಲೆ, ದತ್ತಿನಿಧಿ ನೀಡಿದ ಶಾಲಾ ಹಿರಿಯ ವಿದ್ಯಾರ್ಥಿನಿ ವಿಶಾಲಾಕ್ಷಿ, ಸ್ಪಂದನ ಗೆಳೆಯರ ಬಳಗದ ಕಾರ್ಯದರ್ಶಿ ಸಂತೋಷ್ ಪಿಂಡಿಮನೆ ವೇದಿಕೆಯಲ್ಲಿದ್ದು ಶುಭಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಮಾಡಿ ವಿಜೇತರಿಗೆ ಯುವಜನ ಸಂಯುಕ್ತ ಮಂಡಳಿಯ ವತಿಯಿಂದ ನೀಡಿದ ಬಹುಮಾನವನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ದತ್ತಿನಿಧಿ ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಶಾಲಾ ವಿದ್ಯಾರ್ಥಿಗಳು,ಶಿಕ್ಷಕರು,ಅಕ್ಷರ ದಾಸೋಹ ಸಿಬ್ಬಂದಿಗಳು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಸ್ಪಂದನದ ಸದಸ್ಯರುಗಳು, ಚಂದನದ ಸದಸ್ಯರುಗಳು ಉಪಸ್ಥಿತರಿದ್ದರು.

























Leave a Comment

Your email address will not be published. Required fields are marked *

error: Content is protected !!
Scroll to Top