ಕೆಸರು ಗದ್ದೆ ಕ್ರೀಡಾಕೂಟವನ್ನು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ : ಸುಧಾಕರ ರೈ.ಪಿ.ಬಿ

ಕೆಸರು ಗದ್ದೆ ಕ್ರೀಡಾಕೂಟವನ್ನು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಪಿ.ಬಿ.ಸುಧಾಕರ ರೈ ಹೇಳಿದರು.
ಸುಳ್ಯದ ಯುವಜನ ಸಂಯುಕ್ತ ಮಂಡಳಿ, ಅಜ್ಜಾವರ ಪ್ರತಾಪ ಯುವಕ ಮಂಡಲ, ಚೈತ್ರ ಯುವತಿ ಮಂಡಲ ಇದರ ವತಿಯಿಂದ 5 ನೇ ವರ್ಷದ ಕಂಡದ ಗೌಜಿ ಕೆಸರ್ದ ಪರ್ವವನ್ನು ಆ.16ರಂದು ಅಜ್ಜಾವರದ ಕೊರಂಗುಬೈಲು ಗದ್ದೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ಯುವ ಸಂಘಟನೆಗಳು ಇಲ್ಲಿ ಕೆಸರು ಗದ್ದೆ ಕ್ರೀಡಾಕೂಟ ಹಮ್ಮಿಕೊಂಡು ನಮ್ಮ‌ ಹಿಂದಿನ ಪರಂಪೆಯನ್ನು ನೆನಪಿಸುವ ಕಾರ್ಯ ಮಾಡಿರುವುದು ಶ್ಲಾಘನೀಯ,ಕ್ರೀಡಾಕೂಟಕ್ಕೆ ಪ್ರತಿವರ್ಷ ಗದ್ದೆಯನ್ನು ಮೀಸಲಿಟ್ದು ಬಾಲಕೃಷ್ಣ ನಾಯ್ಕರು ನೀಡುತ್ತಿರುವುದು ದೊಡ್ಡ ಕೊಡುಗೆಯಾಗಿದೆ ಎಂದು ಹೇಳಿದರು.
ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಲೀಲಾ ಮನಮೋಹನ್, ಗದ್ದೆಯ ಮಾಲಿಕರಾದ ಬಾಲಕೃಷ್ಣ ನಾಯ್ಕ್ ಅಜ್ಜಾವರ, ಪ್ರತಾಪ್ ಯುವಕ ಮಂಡಲದ ಗೌರವಾಧ್ಯಕ್ಷ ಶಿವಪ್ರಕಾಶ್ ಅಡ್ಪಂಗಾಯ, ಅಜ್ಜಾವರ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗೋಪಿನಾಥ್ ಮೆತ್ತಡ್ಕ ಇತರರು ಉಪಸ್ಥಿತರಿದ್ದರು.
ಪ್ರತಾಪ್ ಯುವಕ ಮಂಡಲ ಅಧ್ಯಕ್ಷ ಗುರುರಾಜ್ ಸ್ವಾಗತಿಸಿದರು. ವಿನುತಾ ಪಾತಿಕಲ್ಲು ವಂದಿಸಿದರು. ಚೈತ್ರಾ ಯುವತಿ ಮಂಡಲದ ಅಧ್ಯಕ್ಷೆ ಶಶ್ಮಿ ಭಟ್, ರಮೇಶ್ ಮೇದಿನಡ್ಕ ಕಾರ್ಯಕ್ರಮ ನಿರೂಪಿಸಿದರು.
ಕೆಸರು ಗದ್ದೆಯಲ್ಲಿ ವಿವಿಧ ಸ್ಪರ್ಧೆಗಳು ನಡೆದವು.
ಪ್ರಸಾದ್ ಕಾಟೂರು ಕ್ರೀಡಾಕೂಟದ ಉದ್ಘೋಷಕರಾಗಿ ಸಹಕರಿಸಿದರು.

























Leave a Comment

Your email address will not be published. Required fields are marked *

error: Content is protected !!
Scroll to Top