ತೊಡಿಕಾನ ಅಂಗನವಾಡಿ ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳು ಆಗಸ್ಟ್ 15 ಸ್ವಾತಂತ್ರೋತ್ಸವದ ದಿನದಂದು ಶುಭಾರಂಭಗೊಂಡಿತು.
ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಮತ್ತು ತೊಡಿಕನ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಚಂದ್ರಾವತಿ ತರಗತಿಗಳನ್ನು ಉದ್ಘಾಟಿಸಿದರು.
ಅಂಗನವಾಡಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ವಾಸವಿ ಮುಪ್ಪಸೇರುಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಭವಾನಿ ಚಿಟ್ಟನೂರು , ಮಾಜಿ ಸಸ್ಯರಾದ ರವೀಂದ್ರ ಪಂಜಿಕೋಡಿ, ಉಷಾ ಅಡ್ಯಡ್ಕ, ತೊಡಿಕಾನ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ನವೀನ್ ಎ ಬಿ, ಉಪಾಧ್ಯಕ್ಷೆ ಸೌಮ್ಯ ಭಟ್, ಮಕ್ಕಳ ಪೋಷಕರು, ಹಿರಿಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಶಿಕ್ಷಕಿ ಹೇಮಾವತಿ ಮೆತಡ್ಕ ಸ್ವಾಗತಿಸಿ, ಶಿಕ್ಷಕ ಬಾಲರಾಜ್ ವಂದಿಸಿದರು. ಅಂಗನವಾಡಿ ಸಹಾಯಕಿ ಸೀತ ಕಳ್ಳಂಬಳ ಮತ್ತು ಅಂಗನವಾಡಿ ಶಾಲಾ ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಸಹಕರಿಸಿದರು
















