ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಬಿ.ಸಿ ನಾಗೇಶ್ ಇನ್ನಿಲ್ಲ

























ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಬಿ.ಸಿ. ನಾಗೇಶ್ (67) ಅವರು ಅನಾರೋಗ್ಯದಿಂದ ಆ.18ರಂದು ಬೆಂಗಳೂರಿನಲ್ಲಿ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ಕೊನೆಯುಸಿರೆಳೆದರು.
ಅವರ ಸ್ವಕ್ಷೇತ್ರವಾದ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಾಳೆ (ಬುಧವಾರ) ಅಂತಿಮ ಸಂಸ್ಕಾರ ನೆರವೇರಲಿದೆ.
ತುಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರದಿಂದ 2008 ಮತ್ತು 2018 ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ನಾಗೇಶ್ ಅವರು, ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top