ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ಆ 20 ರಂದು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ರಸ್ತೆ ಸುರಕ್ಷತೆ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರು ಹಾಗೂ ಸುಳ್ಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ ದಮಯಂತಿ ಸೋಮಯ್ಯರವರು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ನಮ್ಮ ಸುರಕ್ಷತೆ ನಮ್ಮ ಕೈಯಲ್ಲಿದೆ.ಹೆಚ್ಚಿನ ಅಪಘಾತಗಳಿಗೆ ನಮ್ಮ ನಿರ್ಲಕ್ಷ್ಯವೇ ಕಾರಣ, ರಸ್ತೆ ಸುರಕ್ಷತೆ ನಿಯಮ ಪಾಲಿಸುವುದರಿಂದ ಅಪಾಯವನ್ನು ತಪ್ಪಿಸಬಹುದು ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾದ ಸುಳ್ಯ ತಾಲೂಕು ವಕೀಲರ ಸಂಘದ ಅಧ್ಯಕ್ಷ ಸುಕುಮಾರ್ ಕೊಡ್ತುಗುಳಿ ಹಾಗೂ ಎ.ಸಿ ವಸಂತ ರವರು ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತಾಡಿದರು.ಪ್ಯಾನಲ್ ವಕೀಲರಾದ ಮಹಮ್ಮದ್ ರಶೀದ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ರಸ್ತೆ ಸುರಕ್ಷತೆ ಜಾಗ್ರತೆ ಕುರಿತು ವಿದ್ಯಾರ್ಥಿಗಳಿಗೆ ಸಂಕ್ಷಿಪ್ತವಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ಯಾನೆಲ್ ವಕೀಲರಾದ ಚರಣ್ ರಾಜ್ ಕೆ. ಎಮ್ ಮತ್ತು ನ್ಯಾಯಾಲಯದ ಸಿಬ್ಬಂದಿಗಳದ ಲಾವಣ್ಯ, ಐಶ್ವರ್ಯ ಇವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಸೋಮಶೇಖರ್ ರವರು ಸ್ವಾಗತಿಸಿ ಶಿಕ್ಷಕ ಸುರೇಶ್ ವಂದಿಸಿದರು ಶಿಕ್ಷಕ ಮೋಹನ್ ಚಂದ್ರರವರು ಕಾರ್ಯಕ್ರಮ ನಿರೂಪಿಸಿದರು.
ಅರಂತೋಡು : ರಸ್ತೆ ಸುರಕ್ಷತೆ ಕುರಿತು ಕಾನೂನು ಅರಿವು ಕಾರ್ಯಕ್ರಮ
















