ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ 2026

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಅಗಸ್ಟ್ 21ನೇ ಶುಕ್ರವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ, ಬಾಳೆ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ ಅತಿಥಿಗಳನ್ನು ಕಾಲೇಜು ಮುಂಭಾಗದಲ್ಲಿ ಮಹಾಬಲಿ ಚಕ್ರವರ್ತಿ ವೇಷಧಾರಿ ಜೊತೆ ಸಿಂಗಾರಿ ಮೇಳದ ಮೂಲಕ ಕರೆತಂದು, ಕೆವಿಜಿ ಷಶ್ಠ್ಯಬ್ಧ ರಂಗಮಂದಿರದಲ್ಲಿ ಸಾಂಪ್ರದಾಯಿಕವಾಗಿ ಚೆಂಡೆ ವಾದನದೊಂದಿಗೆ ದೀಪ ಬೆಳಗಿಸಿ ಓಣಂ ಕಾರ್ಯಕ್ರಮ ಉತ್ಸವಂ 2026ನ್ನು ಉದ್ಘಾಟಿಸಿದರು. ಅತಿಥಿಗಳ ಶುಭನುಡಿಗಳೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು.

























ವೇದಿಕೆಯಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪದವಿ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ, ಐಕ್ಯೂಎಸಿ ಸಂಯೋಜಕಿ ಡಾ. ಮಮತಾ ಕೆ, ಪದವಿ ಪೂರ್ವ ಪ್ರಾಂಶುಪಾಲೆ ಮಿಥಾಲಿ ಪಿ ರೈ, ಸಾಂಸ್ಕೃತಿಕ ಸಂಘದ ಸಂಚಾಲಕ ವಿಷ್ಣು ಪ್ರಶಾಂತ್ ಹಾಗೂ ಎರಡೂ ವಿದ್ಯಾಸಂಸ್ಥೆಗಳ ಎಲ್ಲಾ ಬೋದಕ ಬೋದಕೇತರ ವೃಂದದವರು ಉಪಸ್ಥಿತರಿದ್ದರು.

ನಂತರ ವೇದಿಕೆಯಲ್ಲಿ ಚೆಂಡೆವಾದನ ಸಿಂಗಾರಿಮೇಳ ಪ್ರದರ್ಶನ ಹಾಗೂ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕ ವೃಂದದವರಿಂದ ತಿರುವಾದಿರ ನೃತ್ಯ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಮದ್ಯಾಹ್ನ ಸಾಂಪ್ರದಾಯಿಕ ಓಣಂ ಸದ್ಯ ಸಹಭೋಜನ ಏರ್ಪಡಿಸಲಾಗಿತ್ತು. ನಂತರ ಓಣಂ ಪ್ರಯುಕ್ತ ಏರ್ಪಡಿಸಿದ ವಿವಿಧ ಆಟಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡರು. ಎಲ್ಲರೂ ಸಾಂಪ್ರದಾಯಿಕ ಉಡುಗೆ ತೊಡುಗೆಗಳಲ್ಲಿ ಮಿಂಚಿ, ಚೆಂಡೆವಾದನ ಸಿಂಗಾರಿಮೇಳಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಕುಲದೀಪ್ ಪೆಲ್ತಡ್ಕ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಕಾಲೇಜು ಸಾಂಸ್ಕೃತಿಕ ಸಂಘದ ವಿಷ್ಣು ಪ್ರಶಾಂತ್ ಮತ್ತು ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.

Leave a Comment

Your email address will not be published. Required fields are marked *

error: Content is protected !!
Scroll to Top