ಧರ್ಮಸ್ಥಳದ ಸಾಮಾಜಿಕ ಕಾರ್ಯಗಳಲ್ಲಿ ಎಲ್ಲರೂ ಒಗ್ಗಟ್ಟಾಗಿ ಭಾಗವಹಿಸೋಣ: ಎನ್‌.ಎ. ರಾಮಚಂದ್ರ

ಸುಳ್ಯ: ಧರ್ಮಸ್ಥಳದ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಜಾತಿ, ಧರ್ಮ ಹಾಗೂ ಪಕ್ಷ ಭೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಭಾಗವಹಿಸಬೇಕು ಎಂದು ಜಿಲ್ಲಾಜನಜಾಗೃತಿ ಸ್ಥಾಪಕ ಅಧ್ಯಕ್ಷ ಎನ್‌.ಎ. ರಾಮಚಂದ್ರ ಕರೆ ನೀಡಿದರು.































ಕಾರ್ಯಾತೋಡಿಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಡೆದ ಸುಳ್ಯ ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಬಾಬು ನಾಯ್ಕ ಮಾತನಾಡಿ, ಮಹಾತ್ಮಾ ಗಾಂಧೀಜಿ ಕಂಡ ರಾಮರಾಜ್ಯದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 44 ವರ್ಷಗಳ ಹಿಂದೆ ಬಿತ್ತಿದ ಜ್ಞಾನ ಮತ್ತು ಅಭಿವೃದ್ಧಿಯ ಬೀಜ ಇಂದು ಹೆಮ್ಮರವಾಗಿ ಬೆಳೆದಿದೆ. ಈ ಯೋಜನೆಯನ್ನು ಜವಾಬ್ದಾರಿಯಿಂದ ಮುನ್ನಡೆಸುವ ಹೊಣೆ ನೂತನ ಪದಾಧಿಕಾರಿಗಳ ಮೇಲಿದೆ ಎಂದರು.

ಜಿಲ್ಲಾಜನಜಾಗೃತಿ ಅಧ್ಯಕ್ಷ ವಿಶ್ವನಾಥ ರೈ ಕಲೆಂಜ ಮಾತನಾಡಿ, ನೂತನ ಪದಾಧಿಕಾರಿಗಳಿಗೆ ಉತ್ತಮ ಸಹಕಾರ ನೀಡುವುದರೊಂದಿಗೆ ಸಂಸ್ಥೆಯ ಕಾರ್ಯಕ್ರಮಗಳಿಗೆ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

ಸುಳ್ಯದ ಗಣ್ಯರಾದ ಅಶೋಕ ಪ್ರಭು ಮಾತನಾಡಿ, ಧರ್ಮಸ್ಥಳ ಯೋಜನೆ ಸಮಾಜದ ಎಲ್ಲರಿಗೂ ಅವಶ್ಯಕವಾಗಿದ್ದು, ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಡಾ. ವೀಣಾ ಭಟ್ ಮಾತನಾಡಿ, ಧರ್ಮಸ್ಥಳ ಯೋಜನೆಯ ವಿವಿಧ ಕಾರ್ಯಕ್ರಮಗಳು ಮಹಿಳೆಯರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿವೆ ಎಂದು ಹೇಳಿದರು.

ಜನಜಾಗೃತಿ ತಾಲ್ಲೂಕು ಅಧ್ಯಕ್ಷ ವೆಂಕಪ್ಪ ಗೌಡ ಮಾತನಾಡಿ, ಕ್ಷೇತ್ರವು ಕಳಂಕರಹಿತವಾಗಿ ಮುನ್ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಕೈಗೊಳ್ಳೋಣ ಎಂದರು.

ತಾಲ್ಲೂಕು ಯೋಜನಾಧಿಕಾರಿ ಮಾಧವ ಗೌಡ ಅವರು ಕಳೆದ ನಾಲ್ಕು ವರ್ಷಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪದಾಧಿಕಾರಿಗಳು ಹಾಗೂ ಯೋಜನೆಗೆ ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಪತ್ತಿನ ಸಹಕಾರ ಸಂಘ ಅಲೆಟ್ಟಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ಶ್ರೀ ಕಲ್ಕೂಡ ದೈವಸ್ಥಾನದ ಧರ್ಮದರ್ಶಿ ಉಮೇಶ್ ಪಿ.ಕೆ., ಮೂಕಾಂಬಿಕಾ ಭಜನಾ ಮಂದಿರದ ಗೌರವಾಧ್ಯಕ್ಷ ಶ್ರೀಪತಿ ಭಟ್ ಸೇರಿದಂತೆ ವಲಯದ ನೂತನ ಹಾಗೂ ನಿಕಟಪೂರ್ವ ಒಕ್ಕೂಟ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ವಲಯ ಒಕ್ಕೂಟದ ಅಧ್ಯಕ್ಷ ಮನೋಹರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಲಯದ ಸಂಘಗಳ ಸದಸ್ಯರು ಹಾಗೂ ಊರಿನ ಗಣ್ಯರು ಭಾಗವಹಿಸಿದ್ದರು.

ಸೇವಾಪ್ರತಿನಿಧಿ ಸುರೇಶ್ ಸೌಜನ್ಯ ನಿರೂಪಿಸಿದರು. ಮೇಲ್ವಿಚಾರಕರು ಸ್ವಾಗತಿಸಿದರು. ಸವಿತಾ ವರದಿ ವಾಚಿಸಿದರು.

Leave a Comment

Your email address will not be published. Required fields are marked *

error: Content is protected !!
Scroll to Top