ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಆದ್ಯತೆ

ಮಂಗಳೂರು, ಸೆ.1: ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ರಾಜ್ಯ ಸಚಿವ ಸಂಪುಟ ಸಭೆಯನ್ನು ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಸಂಬಂಧಿಸಿದ ಪ್ರಮುಖ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳ ಪ್ರಸ್ತಾವನೆಗಳನ್ನು ಸಿದ್ಧಪಡಿಸಿ, ಅಗತ್ಯ ಸಚಿವ ಸಂಪುಟ ಟಿಪ್ಪಣಿಗಳನ್ನು ಮಂಡಿಸಲು ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಕರಾವಳಿಯ ಮೂಲಸೌಕರ್ಯ, ಪ್ರವಾಸೋದ್ಯಮ, ಮೀನುಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಬೇಡಿಕೆಗಳು ಸಭೆಯಲ್ಲಿ ಚರ್ಚೆಗೆ ಬರುವ ನಿರೀಕ್ಷೆಯಿದೆ. ತುಳು ಭಾಷೆಗೆ ಹೆಚ್ಚಿನ ಅಧಿಕೃತ ಸ್ಥಾನಮಾನ, ಪ್ರವಾಸೋದ್ಯಮ ನೀತಿ, ಕಸ್ತೂರಿ ರಂಗನ್ ವರದಿ ಹಾಗೂ ಮಂಗಳೂರು ವಿಮಾನ ನಿಲ್ದಾಣದ ವಿಸ್ತರಣೆಯಂತಹ ವಿಷಯಗಳ ಬಗ್ಗೆಯೂ ನಿರೀಕ್ಷೆ ವ್ಯಕ್ತವಾಗಿದೆ.
ಮಂಗಳೂರಿನಲ್ಲಿ ನಡೆಯಲಿರುವ ಈ ಸಭೆ ಕರಾವಳಿ ಭಾಗದ ಬಹುಕಾಲದ ಬೇಡಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ಸ್ಪಂದನೆ ದೊರೆಯುವ ನಿರೀಕ್ಷೆಯನ್ನು ಮೂಡಿಸಿದೆ. ಸಭೆಯಲ್ಲಿ ಯಾವ ಯೋಜನೆಗಳಿಗೆ ಅಂತಿಮ ಅನುಮೋದನೆ ಸಿಗಲಿದೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.































Leave a Comment

Your email address will not be published. Required fields are marked *

error: Content is protected !!
Scroll to Top