ತಾಲೂಕು ಭಜನಾ ಪರಿಷತ್ ಪದಾಧಿಕಾರಿಗಳ ಸಭೆ

ಸುಳ್ಯ, ಸೆ. 1: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವತಿಯಿಂದ ಸುಳ್ಯ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪದಾಧಿಕಾರಿಗಳ ಸಭೆಯು ಸೆ. 1ರಂದು ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು.
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಅಧ್ಯಕ್ಷ ಸೋಮಶೇಖರ ಪೈಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.
ಸಭೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ. 29ರಿಂದ ಅ. 4ರವರೆಗೆ ನಡೆಯಲಿರುವ ಏಳು ದಿನಗಳ ಭಜನಾ ತರಬೇತಿ ಕಮ್ಮಟಕ್ಕೆ ಅಭ್ಯರ್ಥಿಗಳ ಆಯ್ಕೆ ಹಾಗೂ ಧರ್ಮಸ್ಥಳದಲ್ಲಿ ನಡೆಯಲಿರುವ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿರುವ ಭಜನಾ ಮಂಡಳಿಗಳ ಕುರಿತು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ರಾಜ್ಯ ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್ ಅವರು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವತಿಯಿಂದ ಸುಳ್ಯ ತಾಲೂಕಿನಲ್ಲಿ ನಡೆಯಲಿರುವ 10ನೇ ವರ್ಷದ ಭಜನೋತ್ಸವ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಚರ್ಚಿಸಲಾಯಿತು.
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಸಂಚಾಲಕ ಮಾಧವ ಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಭಜನಾ ಪರಿಷತ್‌ನ ಪದಾಧಿಕಾರಿಗಳ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.
ಸಭೆಯ ವೇದಿಕೆಯಲ್ಲಿ ಸಮನ್ವಯಾಧಿಕಾರಿ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಂತೋಷ್, ಕಾರ್ಯದರ್ಶಿ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಸತೀಶ್ ಟಿ.ಎನ್., ತಾಲೂಕು ಉಪಾಧ್ಯಕ್ಷರು ಸಂಧ್ಯಾ ಮಂಡೆಕೋಲು, ಗೌರವಾಧ್ಯಕ್ಷರು ಶಿವಪ್ರಸಾದ್ ಅಲೆಟ್ಟಿ, ತಾಲೂಕು ಉಪಾಧ್ಯಕ್ಷರು ನಾರಾಯಣ ಕೊಡ್ತುಗುಳಿ ಹಾಗೂ ತಾಲೂಕು ಜತೆ ಕಾರ್ಯದರ್ಶಿ ಜಯಪ್ರಕಾಶ್ ಕಲ್ಲಪಳ್ಳಿ ಉಪಸ್ಥಿತರಿದ್ದರು.
ಸಭೆಯಲ್ಲಿ ತಾಲೂಕು ಹಾಗೂ ವಿವಿಧ ವಲಯಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಮೇಲ್ವಿಚಾರಕಿ ಜಯಶ್ರೀ ಸ್ವಾಗತಿಸಿದರು. ಮೇಲ್ವಿಚಾರಕಿ ಸವಿತಾ ವಂದಿಸಿದರು.































Leave a Comment

Your email address will not be published. Required fields are marked *

error: Content is protected !!
Scroll to Top