ಸುಳ್ಯ: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಅತ್ತೆಯ ಮೇಲೆ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಅನವುಗುಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಚೂರಿಯಿಂದ ಇರಿದ ವ್ಯಕ್ತಿಯನ್ನು ಮುಕ್ಕೂರು ನಿವಾಸಿ ಗಣೇಶ್ (38) ಎಂದು ಗುರುತಿಸಲಾಗಿದೆ ಆರೋಪಿ ತನ್ನ ಪತ್ನಿ ವಿನಿತಾ (32) ಹಾಗೂ ಆಕೆಯ ತಾಯಿ ಕುಸುಮಾ (50) ಅವರ ಮೇಲೆ ಯಾವುದೋ ಹರಿತವಾದ ಸಾಧನದಿಂದ ಹಲ್ಲೆ ನಡೆಸಿ ರಕ್ತಗಾಯಗೊಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಗಾಯವಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಳ್ಳಾರೆ : ತನ್ನ ಅತ್ತೆ ಹಾಗೂ ಪತ್ನಿಗೆ ಚೂರಿಯಿಂದ ಇರಿದ ವ್ಯಕ್ತಿ




















