ಮೆದುಳಿನ ರಕ್ತಸ್ರಾವದಿಂದ 35ರ ಹರೆಯದ ಮೋಹನ್ ನಾಯ್ಕ ದಡ್ಡು ನಿಧನ

ಕಡಬ: ಪಪ್ಸ್ ಸರಬರಾಜು ಮಾಡುವ ಉದ್ದೇಶದಿಂದ ಕಾರಿನಲ್ಲಿ ಹೊರಟಿದ್ದ ಎಡಮಂಗಲ ಗ್ರಾಮದ ಯುವ ಬೇಕರಿ ಉದ್ಯಮಿ ಮೋಹನ್ ನಾಯ್ಕ ದಡ್ಡು (35) ಅವರು ಮೆದುಳಿನ ರಕ್ತಸ್ರಾವಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.8ರಂದು ನಿಧನರಾದರು.
ಎಡಮಂಗಲದಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದ ಮೋಹನ್ ನಾಯ್ಕ ಅವರು ಸೆಪ್ಟೆಂಬರ್ 6ರಂದು ಸಿದ್ಧಪಡಿಸಿದ್ದ ಪಪ್ಸ್‌ಗಳನ್ನು ಸರಬರಾಜು ಮಾಡಲು ಕಾರಿನಲ್ಲಿ ತೆರಳುತ್ತಿದ್ದ ವೇಳೆ ರಕ್ತದೊತ್ತಡ ಹೆಚ್ಚಾಗಿ ಅಸ್ವಸ್ಥಗೊಂಡರೆನ್ನಲಾಗಿದೆ. ತಕ್ಷಣ ಅವರನ್ನು ಕಡಬ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ತೀವ್ರ ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

































Leave a Comment

Your email address will not be published. Required fields are marked *

error: Content is protected !!
Scroll to Top