ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಪದಾಧಿಕಾರಿಗಳ ಅಕ್ಟೋಬರ್ 2 ಗಾಂಧಿ ಜಯಂತಿ ಪ್ರಯುಕ್ತ ನಡೆಯುವ ಕಾರ್ಯಕ್ರಮದ ಕುರಿತಾದ ಪೂರ್ವಭಾವಿ ಸಭೆಯು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ವಿಶ್ವನಾಥ ರೈ ಕಳಂಜರವರ ಅಧ್ಯಕ್ಷತೆಯಲ್ಲಿ ಸುಳ್ಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಶ್ರೀ ಎನ್ ಎ ರಾಮಚಂದ್ರರವರು ನೆರವೇರಿಸಿದರು. ಸಭೆಯಲ್ಲಿ ಅಕ್ಟೋಬರ್ 2 ಗಾಂಧಿ ಜಯಂತಿ ಪ್ರಯುಕ್ತ ನಡೆಯುವ ಕಾರ್ಯಕ್ರಮದ ರೂಪುರೇಷೆಯ ಕುರಿತು ಚರ್ಚಿಸಲಾಯಿತು.
ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕರವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಘಿ ಮಾತನಾಡಿದರು.ಕಾರ್ಯಕ್ರಮದಲ್ಲಿ 12 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಜಿಲ್ಲಾಧ್ಯಕ್ಷರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ,ದ.ಕ.ಜಿಲ್ಲೆ – 2, ವೆಂಕಪ್ಪ ಗೌಡ, ತಾಲೂಕು ಅಧ್ಯಕ್ಷರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ,ಸುಳ್ಯ ತಾಲೂಕು, ಇಂದುಶೇಖರ್, ತಾಲೂಕು ಅಧ್ಯಕ್ಷರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ,ಕಡಬ ತಾಲೂಕು, ಸತೀಶ್ ನಾಯ್ಕ, ತಾಲೂಕು ಅಧ್ಯಕ್ಷರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ,ಪುತ್ತೂರು ತಾಲೂಕು,ಶ್ರೀ ಸುರೇಶ್ ಕಣೆಮರಡ್ಕ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಸಮಿತಿ ಅಧ್ಯಕ್ಷರು ಸುಳ್ಯ ತಾಲೂಕು, ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ಶ್ರೀ ಸೋಮಶೇಖರ ಪೈಕ, ಸುಳ್ಯ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಭವಾನಿಶಂಕರ ಅಡ್ತಲೆ, ಮಹೇಶ್ ರೈ ಮೇನಾಲ, ಬೂಡು ರಾಧಾಕೃಷ್ಣ ರೈ, ಲೋಕನಾಥ ಅಮೆಚೂರು ಕಡಬ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಮಹೇಶ್ ಕುಮಾರ್, ಅಖಿಲ ಕರ್ನಾಟಕ ಜನಜಾಗೃತಿ ಜಿಲ್ಲಾ ಕೋಆಪ್ಟ್ ಸದಸ್ಯರು, ಕಡಬ ತಾಲೂಕು ಯೋಜನಾಧಿಕಾರಿ ಪ್ರಶಾಂತ್, ಪುತ್ತೂರು ಯೋಜನಾಧಿಕಾರಿ ಶಶಿಧರ್, ತಾಲೂಕು ಜನ ಜಾಗೃತಿ ವೇದಿಕೆಯ ವಲಯಾಧ್ಯಕ್ಷರು ,ಪದಾಧಿಕಾರಿಗಳು, ವಲಯದ ಮೇಲ್ವಿಚಾರಕರು, ಶೌರ್ಯ ವಿಪತ್ತು ಘಟಕದ ಮಾಸ್ಟರ್ ಮತ್ತು ಕ್ಯಾಪ್ಟನ್, ಒಕ್ಕೂಟದ ಅಧ್ಯಕ್ಷರು ಹಾಗೂ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಸುಳ್ಯ ತಾಲೂಕು ಅಧ್ಯಕ್ಷರಾದ ಶ್ರೀಮತಿ ಸವಿತಾ ಸಂದೇಶ್ ರವರರು ಪ್ರಾರ್ಥಿಸಿದರು. ಶ್ರೀ ಮಾಧವ ಗೌಡ ಯೋಜನಾಧಿಕಾರಿಗಳು ವೇದಿಕಯಲ್ಲಿರುವ ಗಣ್ಯರನ್ನು ಸ್ವಾಗತಿಸಿ , ಸಂಪಾಜೆ ವಲಯದ ಮೇಲ್ವಿಚಾರಕರಾದ ಹರೀಶ್ ಆಚಾರ್ಯರವರು ಧನ್ಯವಾದ ಸಮರ್ಪಿಸಿದರು. ಗುತ್ತಿಗಾರು ವಲಯದ ಮೇಲ್ವಿಚಾರಕರಾದ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಗಾಂಧಿ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆ




















