ಬಾಳುಗೋಡು : ಕರಕುಶಲ ವಸ್ತುಗಳ ತಯಾರಿಕೆ ಕುರಿತು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ

ಬಾಳುಗೋಡು, ಸೆ. 9: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು ಹಾಗೂ ಬಾಳುಗೋಡು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಶಾಲಾ ಶಿಬಿರ ಕಾರ್ಯಕ್ರಮವು ಸೆ. 9ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಳುಗೋಡಿನಲ್ಲಿ ನಡೆಯಿತು.ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶುಭ ದಯಾನಂದ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಬಾಳುಗೋಡು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ನಿತಿನ್ ಕುಮಾರ್ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಸುಬ್ರಹ್ಮಣ್ಯ ವಲಯದ ಮೇಲ್ವಿಚಾರಕ ಬಾಲಕೃಷ್ಣ ಗೌಡ ಕೆ. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮನೋರಮ ಮುಚ್ಚಾರ ಅವರು ವಿದ್ಯಾರ್ಥಿಗಳಿಗೆ ವಿವಿಧ ಕರಕುಶಲ ವಸ್ತುಗಳ ತಯಾರಿಕೆಯ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು. ಬಣ್ಣಬಣ್ಣದ ಕಾಗದಗಳು ಹಾಗೂ ತಂತಿಗಳನ್ನು ಬಳಸಿ ಹೂದಾನಿ ಮತ್ತು ಅಲಂಕಾರಿಕ ಹೂಗಳನ್ನು ತಯಾರಿಸುವ ವಿಧಾನವನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತೋರಿಸಿಕೊಟ್ಟರು. ವಿದ್ಯಾರ್ಥಿಗಳು ಆಸಕ್ತಿಯಿಂದ ಶಿಬಿರದಲ್ಲಿ ಪಾಲ್ಗೊಂಡರು.ಈ ಸಂದರ್ಭದಲ್ಲಿ ಶಾಲೆಯ ಅತಿಥಿ ಶಿಕ್ಷಕಿ ಶ್ರೀಮತಿ ಸುದರ್ಶಿನಿ ಉಪಸ್ಥಿತರಿದ್ದರು. ಬಾಳುಗೋಡು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ದೀಕ್ಷಾ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ಅಕ್ಷಿತಾ ವಂದಿಸಿದರು.



































Leave a Comment

Your email address will not be published. Required fields are marked *

error: Content is protected !!
Scroll to Top