ತೊಡಿಕಾನ ಸುಳ್ಯ ನಡುವೆ ಶೀಘ್ರವೇ ಕೆ.ಎಸ್.ಆರ್.ಟಿ.ಸಿ ಬಸ್ ಚಾರ ಆರಂಭಗೊಳ್ಳಲಿದೆ.
ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿಯೂ ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಪ್ರಯೋಜನ ಪಡೆದು ಮಹಿಳೆಯರು, ಹೆಣ್ಣುಮಕ್ಕಳು ಹಾಗೂ ಯುವತಿಯರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಆದರೆ ಸುಳ್ಯ ತಾಲೂಕಿನ ತೊಡಿಕಾನ ಗ್ರಾಮಕ್ಕೆ ಹಲವು ವರ್ಷಗಳಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರದ ಸೌಲಭ್ಯ ಇಲ್ಲದಿರುವುದರಿಂದ ಇಲ್ಲಿನ ಗ್ರಾಮಸ್ಥರು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುವಂತಾಗಿದೆ.ಇಲ್ಲಿ ಕಳೆದ ಸುಮಾರು 32 ವರ್ಷಗಳಿಂದ ಖಾಸಗಿ ಬಸ್ ಸಂಚಾರ ಮಾತ್ರ ಇದೆ.ಇದು ಇಲ್ಲಿಯ ಜನರಿಗೆ ವರದಾನವಾಗಿ ಪರಿಣಮಿಸಿದೆ.ಇದೀಗ
ಸುಮಾರು 35 ವರ್ಷಗಳ ಬಳಿಕ ತೊಡಿಕಾನ ಗ್ರಾಮಕ್ಕೆ ಮತ್ತೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗುವ ಹೊಸ ಭರವಸೆ ಮೂಡಿದೆ. ಗ್ರಾಮಕ್ಕೆ ಸರ್ಕಾರಿ ಬಸ್ ಸೇವೆ ಆರಂಭವಾಗಬೇಕು ಎಂಬುದು ಹಲವು ವರ್ಷಗಳಿಂದ ಗ್ರಾಮಸ್ಥರ ಪ್ರಸಂಸದಬೇಡಿಕೆಯಾಗಿದ್ದು, ಈ ಬೇಡಿಕೆಗೆ ಇದೀಗ ಸ್ಪಂದನೆ ದೊರೆಯುವ ನಿರೀಕ್ಷೆ ಹೆಚ್ಚಾಗಿದೆ.
ತೊಡಿಕಾನವು ಸುಳ್ಯ ತಾಲೂಕಿನ ಪ್ರಮುಖ ಗ್ರಾಮಗಳಲ್ಲಿ ಒಂದಾಗಿದ್ದು, ಇಲ್ಲಿನ ಜನರು ಶಿಕ್ಷಣ, ಉದ್ಯೋಗ, ಆರೋಗ್ಯ ಸೇವೆ, ಸರ್ಕಾರಿ ಕಚೇರಿ ಸೇರಿದಂತೆ ವಿವಿಧ ಅಗತ್ಯಗಳಿಗಾಗಿ ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ತೆರಳಬೇಕಾಗುತ್ತದೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಕೊರತೆಯಿಂದ ಬಡ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಹಾಗೂ ದಿನನಿತ್ಯದ ಕೆಲಸಕ್ಕಾಗಿ ಪ್ರಯಾಣಿಸುವವರು ಆರ್ಥಿಕವಾಗಿ ಸಾಕಾಷ್ಟು ತೊಂದರೆ ಅನುಭವಿಸುತ್ತಿದ್ದಾರೆ.ಖಾಸಗಿ ಬಸ್ ದರ ಏರಿಕೆಯಾಗಿದೆ.
ವಿಶೇಷವಾಗಿ ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಬಳಿಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ದೊರೆತಿದೆ. ಆದರೆ ತೊಡಿಕಾನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರವಿಲ್ಲದ ಕಾರಣ, ಯೋಜನೆಯ ಸೌಲಭ್ಯವನ್ನು ಬಳಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ಗ್ರಾಮಸ್ಥರಲ್ಲಿದೆ.
ಈ ಹಿನ್ನೆಲೆಯಲ್ಲಿ ತೊಡಿಕಾನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಿಸುವಂತೆ ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸುತ್ತಾ ಬಂದಿದ್ದಾರೆ. ಇದೀಗ ಸುಮಾರು ಮೂರುವರೆ ದಶಕಗಳ ಬಳಿಕ ಗ್ರಾಮಕ್ಕೆ ಸರ್ಕಾರಿ ಬಸ್ ಸೇವೆ ಮರಳಿ ಬರಲಿದೆ ಎಂಬ ನಿರೀಕ್ಷೆ ಗ್ರಾಮಸ್ಥರಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಬಸ್ ಸಂಚಾರ ಆರಂಭವಾದರೆ ತೊಡಿಕಾನ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು, ಉದ್ಯೋಗಿಗಳು ಮತ್ತು ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜೊತೆಗೆ ಗ್ರಾಮೀಣ ಪ್ರದೇಶದ ಜನರ ನಗರ ಸಂಪರ್ಕವೂ ಸುಗಮವಾಗಲಿದೆ. ಈ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳು ಶೀಘ್ರ ಕ್ರಮ ಕೈಗೊಂಡು ಬಸ್ ಸೇವೆಯನ್ನು ಆರಂಭಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.
35 ವರ್ಷಗಳ ಬಳಿಕ ತೊಡಿಕಾನ ರಸ್ತೆಯಲ್ಲಿ ಮತ್ತೆ ಕೆಎಸ್‌ಆರ್‌ಟಿಸಿ ಬಸ್ ಸಂಚರಿಸುವ ದಿನಕ್ಕಾಗಿ ಗ್ರಾಮಸ್ಥರು ಕಾತರದಿಂದ ಕಾಯುತ್ತಿದ್ದಾರೆ.
ತೊಡಿಕಾನ ಗ್ರಾಮಕ್ಕೆ ಕೆ.ಎಸ್.ಆರ್.ಟಿ ಸಿ ಬಸ್ಸು ಸೌಕರ್ಯ ಬೇಕು ಎಂದು ಸ್ಥಳೀಯ ಪ್ರಮಖ ಎರಡು ರಾಜಕೀಯ ಪಕ್ಷದ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ.
ಗ್ರಾಮದ ಜನರ ಬೇಡಿಕೆಯಂತೆ ಸುಳ್ಯದಿಂದ ತೊಡಿಕಾನಕ್ಕೆ ಶೀಘ್ರವೇ ಕೆ.ಎಸ.ಆರ್.ಟಿ.ಸಿ ಬಸ್ಸ್ ಸಂಚಾರ ಆರಂಭಗೊಳ್ಳುತ್ತದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ.
ಸುಳ್ಯ ತೊಡಿಕಾನದ ಕೆ.ಎಸ್.ಆರ್.ಟಿ.ಸಿ ಬಸ್ಸ್ ರೂಟ್ ಕ್ಯಾನ್ಸಲ್ ಆಗಿತ್ತು.ಅಧಿಕಾರಿಗಳ ಮೇಲೆ ಒತ್ತಡ ತಂದು ರೂಟ್ ಪರ್ಮಿಟ್ ಆಗಿ ಇದೀಗ ಬಸ್ಸ್ ಸಂಚಾರ ಸೆ.16ರಿಂದ ಆರಂಭಗೊಳ್ಳುತ್ತದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ತಿಳಿಸಿದ್ದಾರೆ.
ಜನಪ್ರತಿನಿಧಿಗಳಿಗೆ ಕೆ.ಎಸ್.ಆರ್.ಟಿ.ಸಿ,ಹಿಂದಿನ ಸಾರಿಗೆ ಮಂತ್ರಿಯವರಿಗೆ ತೊಡಿಕಾನ ಗ್ರಾಮಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ಸು ಸಂಚಾರ ಬೇಕೆಂದು ಮನವಿ ಸಲ್ಲಿಸಿದ್ದೇನೆ.ಅಲ್ಲದೆ ಕೆ.ಎಸ್.ಆರ್.ಟಿ.ಸಿ ಮುಖ್ಯ ಕಚೇರಿಗಳ ಅಧಿಕಾರಿಗಳೊಂದಿಗೆ ಸಾರಿಗೆ ಮಂತ್ರಿಗಳ ಪಿ.ಎಯವರೊಂದಿಗೆ ಸಂಪರ್ಕದಲ್ಲಿದ್ದು ಪಯತ್ನ ಮಾಡಿದ್ದೇನೆ.ಸೆ.16ರಂದು ತೊಡಿಕಾನಕ್ಕೆ ಬಸ್ಸ್ ಸಂಚಾರ ಆರಂಭಗೊಳ್ಳುತ್ತದೆ ಎಂದು ನನಗೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಕೆ.ಎಸ್ .ಆರ್.ಟಿ.ಸಿ ಬಸ್ಸ್ ತೊಡಿಕಾನಕ್ಕೆ ಸಂಚಾರ ಮಾಡಬೇಕೆಂದು ನಿರಂತರವಾಗಿ ಹೋರಟ ಮಾಡಿದ ಶಿವಪ್ರಸಾದ್ ಕುಂದಲ್ಪಾಡಿ ತಿಳಿಸಿದ್ದಾರೆ.
ತೊಡಿಕಾನ ಗ್ರಾಮಕ್ಕೆ ಇನ್ನು ಒಂದು ವಾರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸು ಸಂಚಾರ ಆರಂಭಗೊಳ್ಳುತ್ತದೆ ಎಂದು ಕೆ.ಎಸ್.ಆರ್.ಟಿ.ಸಿ ಡಿ.ಟಿ.ಒ ಜೈ ಶಾಂತ್ ಮಾಹಿತಿ ನೀಡಿದ್ದಾರೆ.
























