ಅರಂತೋಡು, ಸೆ.12: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಸಂಪಾಜೆ ವಲಯದ ಸಂಯುಕ್ತ ಆಶ್ರಯದಲ್ಲಿ, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗಡೆಯವರ ಮಾರ್ಗದರ್ಶನದಲ್ಲಿ ಅರಂತೋಡು, ತೊಡಿಕಾನ, ಅರಂಬೂರು ಹಾಗೂ ಮರ್ಕಂಜ ಪ್ರಗತಿ ಬಂಧು ಸ್ವಸಹಾಯ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆ.13ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ.
ಸಂಪಾಜೆ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಹೂವಯ್ಯ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರ ಯೋಗೇಶ್ವರ ಸಿದ್ಧ ಮಠ, ಮರ್ಕಂಜದ ಶ್ರೀ ಶ್ರೀ ಶ್ರೀ ರಾಜೇಶನಾಥ್ ಜಿ. ಅವರು ದೀಪ ಪ್ರಜ್ವಲನೆ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರಲ್ಯ ಅವರು ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರಿಸಲಿದ್ದಾರೆ.ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್, ಉದ್ಯಮಿ ಡಿ.ವಿ. ಸತೀಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಬಾಬು ನಾಯಕ್, ತೊಡಿಕಾನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ. ದಿವಾಕರ ರೈ, ಕೇಂದ್ರ ಒಕ್ಕೂಟ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಮಿತಿ ಸುಳ್ಯ ತಾಲೂಕು ಅಧ್ಯಕ್ಷ ಸೋಮಶೇಖರ ಪೈಕ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ಘಟಕದ ಅಧ್ಯಕ್ಷ ವೆಂಕಪ್ಪ ಗೌಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ಮೊಟ್ಟೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ನಿಕಟಪೂರ್ವ ಅಧ್ಯಕ್ಷ ಭವಾನಿಶಂಕರ ಅಡ್ತಲೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.ಅರಂತೋಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಅಡ್ತಲೆ, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಲೋಕನಾಥ್ ಅಮೆಚೂರು, ಸತೀಶ್ ರಾವ್ ದಾಸರಬೈಲು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಂಪಾಜೆ ವಲಯ ಅಧ್ಯಕ್ಷೆ ಶ್ರೀಮತಿ ಭಾರತಿ ಉಳುವಾರು, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪುಷ್ಪ ಮೇದಪ್ಪ, ಜಗನ್ನಾಥ ಕಾಯರ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯ ಜಗನ್ ಮೋಹನ್ ರೈ, ರತ್ನಾವತಿ ಅಳಿಕೆ, ಚಂದ್ರಶೇಖರ ನೆದ್ಚಿಲು, ಜನಾರ್ದನ ಬಾಳೆಕಜೆ, ಗೋಪಾಲಕೃಷ್ಣ ಬಿ.ಕೆ., ರಾಧಾಕೃಷ್ಣ ಕೆ. ಅಂಗಡಿಮಜಲು ಹಾಗೂ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷೆ ಲೀಲಾವತಿ ಸೂಟಗದ್ದೆ ಸೇರಿದಂತೆ ಇತರರು ಉಪಸ್ಥಿತರಿರುವರು.ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 8 ಗಂಟೆಯಿಂದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಂಪಾಜೆ ವಲಯದ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಯಿಂದ ಸಾಂಸ್ಕೃತಿಕ ವೈಭವ ಆಯೋಜಿಸಲಾಗಿದೆ.
ಅರಂತೋಡು : ನಾಳೆ ಪ್ರಗತಿ ಬಂಧು ಸ್ವಸಹಾಯ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
























