ಸುಳ್ಯ: ನಗರದ ಶ್ರೀಹರಿ ಕಾಂಪ್ಲೆಕ್ಸ್‌ನಲ್ಲಿರುವ ಮಹಾಲಕ್ಷ್ಮಿ ಫ್ಯಾನ್ಸಿ ಅಂಗಡಿಯ ಹಿಂಬದಿಯಲ್ಲಿರುವ ಗೋಡೌನ್‌ನಲ್ಲಿ ಸೋಮವಾರ ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಬೆಂಕಿ ಕಾಣಿಸಿಕೊಂಡ ಕೆಲವೇ ಕ್ಷಣಗಳಲ್ಲಿ ಧಗಧಗನೆ ಉರಿಯಲಾರಂಭಿಸಿದ್ದು, ಗೋಡೌನ್‌ನಲ್ಲಿದ್ದ ವಸ್ತುಗಳಿಗೆ ಬೆಂಕಿ ವ್ಯಾಪಿಸುವ ಆತಂಕ ಎದುರಾಯಿತು. ವಿಷಯ ತಿಳಿದ ಮಹಾಲಕ್ಷ್ಮಿ ಫ್ಯಾನ್ಸಿ ಅಂಗಡಿ ಮಾಲಕರು ಕೂಡಲೇ ಕಟ್ಟಡ ಮಾಲಕರಿಗೆ ಮಾಹಿತಿ ನೀಡಿದರು.
ಘಟನೆಯ ಸುದ್ದಿ ಹರಡುತ್ತಿದ್ದಂತೆ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದರು. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು.
ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಬೆಂಕಿ ಅವಘಡಕ್ಕೆ ನಿಖರ ಕಾರಣ ಹಾಗೂ ಸಂಭವಿಸಿದ ನಷ್ಟದ ಪ್ರಮಾಣದ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಸುಳ್ಯ ಶ್ರೀಹರಿ ಕಾಂಪ್ಲೆಕ್ಸ್‌ನ ಗೋಡೌನ್‌ನಲ್ಲಿ ಬೆಂಕಿ ಅವಘಡ

























