ಒಕ್ಕಲಿಗರ ಆದರ್ಶ ವ್ಯಕ್ತಿ ಪ್ರಶಸ್ತಿಗೆ ಪಿ.ಸಿ. ಜಯರಾಮ ಆಯ್ಕೆ

ಸುಳ್ಯ: ಅಖಿಲ ಭಾರತ ಒಕ್ಕಲಿಗರ ಮಹಾಸಭಾ, ಒಕ್ಕಲಿಗರ ಪರಿಷತ್ತು ಹಾಗೂ ಕೃಷ್ಣಪ್ಪ ರಂಗಯ್ಯ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ‘ಒಕ್ಕಲಿಗರಿಗೆ ಆದರ್ಶ ವ್ಯಕ್ತಿ’ ಪ್ರಶಸ್ತಿಗೆ ಹಿರಿಯ ಸಹಕಾರಿ ಧುರೀಣ ಪಿ.ಸಿ. ಜಯರಾಮ ಅವರು ಆಯ್ಕೆಯಾಗಿದ್ದಾರೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿರುವ ಪಿ.ಸಿ. ಜಯರಾಮ ಅವರು ಸುಳ್ಯದ ವೆಂಕಟಮಣ ಕ್ರೇಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ವಾಪಕಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು, ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸೆ. ೨೦ರಂದು ನಡೆಯಲಿರುವ ರಾಜ್ಯ ಮಟ್ಟದ ಒಕ್ಕಲಿಗರ ಮಹಾಸಭೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.











































Leave a Comment

Your email address will not be published. Required fields are marked *

error: Content is protected !!
Scroll to Top