ಮರಾಟಿ ಸಮಾಜ ಸೇವಾ ಸಂಘ ಸುಳ್ಯ ಇದರ ವಾರ್ಷಿಕ ಮಹಾಸಭೆ ಸೆ.20 ರಂದು ಗಿರಿದರ್ಶಿನಿ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ನಾಯ್ಕ್ ಅಜ್ಜಾವರ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ಸಂಘದ ಸ್ಥಾಪಕಾಧ್ಯಕ್ಷರಾದ ದೇವಪ್ಪ ನಾಯ್ಕ್ ಹೊನ್ನೇಡಿ, ಸ್ಥಾಪಕ ಕಾರ್ಯದರ್ಶಿ ಗೋಪಾಲ ನಾಯ್ಕ್ ದೊಡ್ಡೇರಿ, ಗೌರವಾಧ್ಯಕ್ಷರಾದ ಜನಾರ್ದನ ಬಿ.ಕುರುಂಜಿಭಾಗ್, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ರೇವತಿ ದೊಡ್ಡೇರಿ, ಯುವ ವೇದಿಕೆಯ ಅಧ್ಯಕ್ಷ ಉದಯಕುಮಾರ್ ಎಂ.ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರಮೇಶ್ ನೀರಬಿದಿರೆ ವಾರ್ಷಿಕ ವರದಿಯನ್ನು, ಕೋಶಾಧಿಕಾರಿ ಐತ್ತಪ್ಪ ಎನ್.ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು.
ಈ ಸಂದರ್ಭದಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದು ಮುಂದಿನ ಸಾಲಿನ ಪದಾಧಿಕಾರಿಗಳನ್ನು ಪುನರಾಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಬಾಲಕೃಷ್ಣ ನಾಯ್ಕ್ ಅಜ್ಜಾವರ, ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ನೀರಬಿದಿರೆ, ಕೋಶಾಧಿಕಾರಿಯಾಗಿ ಐತ್ತಪ್ಪ ಎನ್. ಪುನರಾಯ್ಕೆಯಾದರು. ಗೌರವಾಧ್ಯಕ್ಷರಾಗಿ ಜನಾರ್ದನ ಬಿ.ಕುರುಂಜಿಭಾಗ್,ಉಪಾಧ್ಯಕ್ಷರಾಗಿ ಸುಲೋಚನಾ ನಾರಾಯಣ, ಜತೆ ಕಾರ್ಯದರ್ಶಿಯಾಗಿ ಪದ್ಮಾವತಿ ಸುಳ್ಯ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜಗದೀಶ್ ಅರಂಬೂರು, ಜನಾರ್ದನ ನಾಯ್ಕ್ ಕೇರ್ಪಳ, ಶೋಭಾ ಎ.ಕೆ.ನಾಯ್ಕ್, ಈಶ್ವರ ವಾರಣಾಶಿ, ಭವಾನಿಶಂಕರ ಕಲ್ಮಡ್ಕ, ನಿತ್ಯಾನಂದ ಕುಡೇಂಬಿ ಪುನರಾಯ್ಕೆಗೊಂಡರು. ಮ ರಾಟಿ ಮಹಿಳಾ ವೇದಿಕೆಯ ಪದಾಧಿಕಾರಿಗಳನ್ನು ಪುನರಾಯ್ಕೆ ಮಾಡಲಾಯಿತು. ಯುವ ವೇದಿಕೆಯನ್ನು ಪನರ್ ರಚನೆ ಮಾಡಲಾಯಿತು.
ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ನಾಯ್ಕ್ ಅಜ್ಜಾವರ, ಕಾರ್ಯದರ್ಶಿಯಾಗಿ ರಮೇಶ್ ನೀರಬಿದಿರೆ, ಕೋಶಾಧಿಕಾರಿಯಾಗಿ ಐತ್ತಪ್ಪ ಎನ್.ಪುನರಾಯ್ಕೆ

























