ಅರಂತೋಡು, ಸೆ. 22: ಅರಂತೋಡು ಗ್ರಾಮ ಪಂಚಾಯತ್‌ನಲ್ಲಿ ಸುಮಾರು 26 ವರ್ಷಗಳ ಕಾಲ ಬಿಲ್ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ ಮೋಹನ್ ಕುಮಾರ್ ದೇರಾಜೆ ಅವರು ಸಂಪಾಜೆ ಗ್ರಾಮ ಪಂಚಾಯತ್‌ನ ಗ್ರೇಡ್–2 ಪಂಚಾಯತ್ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿದ ಹಿನ್ನೆಲೆಯಲ್ಲಿ ಅರಂತೋಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಸಮಾರಂಭದಲ್ಲಿ ಮಾತನಾಡಿದ ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಅಡ್ತಲೆ ಅವರು, ಮೋಹನ್ ದೇರಾಜೆ ಅವರ ಸುದೀರ್ಘ ಸೇವೆ, ಕರ್ತವ್ಯನಿಷ್ಠೆ ಹಾಗೂ ಕಾರ್ಯವೈಖರಿಯನ್ನು ಶ್ಲಾಘಿಸಿದರು.
ನಿವೃತ್ತ ಪ್ರಾಂಶುಪಾಲ ಕೆ.ಆರ್. ಗಂಗಾಧರ ಅವರು ಅಭಿನಂದನಾ ಭಾಷಣ ಮಾಡಿದರು. ಸಂತೋಷ್ ಕುತ್ತಮೊಟ್ಟೆ, ವೆಂಕಟ್ರಮಣ ಪೆತ್ತಾಜೆ,
ದಯಾನಂದ ಕುರುಂಜಿ, ತೀರ್ಥರಾಮ ಅಡ್ಕಬಳೆ, ನಿವೃತ್ತ ಶಿಕ್ಷಕ ಪುರುಷೋತ್ತಮ, ತೀರ್ಥರಾಮ ಪರ್ನೂಜಿ,ತಿಮ್ಮಯ್ಯ ಮೆತ್ತಡ್ಕ,ಕೆ.ಕೆ ನಾರಾಯಣ ಕುಂಟುಕಾಡು, ಪಂಚಾಯತ್ ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಸ್ವಾಗತಿಸಿ, ವಂದಿಸಿದರು.

























