ಪೆರ್ನಾಜೆಯಲ್ಲಿ ಕಾಡಾನೆ ದಾಂಧಲೆ: ಬಾಳೆ, ಅಡಿಕೆ ಗಿಡಗಳಿಗೆ ಹಾನಿ

ಪೆರ್ನಾಜೆ, ಸೆ.25: ಪೆರ್ನಾಜೆ ಗ್ರಾಮದಲ್ಲಿ ಕಾಡಾನೆಯೊಂದು ತೋಟಗಳಿಗೆ ನುಗ್ಗಿ ಕೃಷಿಗೆ ಹಾನಿ ಉಂಟು ಮಾಡಿದ ಘಟನೆ ಸೆ.25ರಂದು ವರದಿಯಾಗಿದೆ.
ಕುಮಾರ್ ಪೆರ್ನಾಜೆ ಅವರ ತೋಟಕ್ಕೆ ನುಗ್ಗಿದ ಕಾಡಾನೆ ಸುಮಾರು 10 ಬಾಳೆ ಗಿಡಗಳು ಹಾಗೂ ಅಡಿಕೆ ಗಿಡಗಳನ್ನು ನಾಶಪಡಿಸಿದೆ. ಕಾಡಾನೆ ದಾಂಧಲೆಯಿಂದ ಕೃಷಿಕರಿಗೆ ಆತಂಕ ಎದುರಾಗಿದ್ದು, ಬೆಳೆ ನಷ್ಟದಿಂದ ರೈತರು ಚಿಂತಿತರಾಗಿದ್ದಾರೆ.
ಪೆರ್ನಾಜೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆಗಳ ಸಂಚಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡು ಕೃಷಿಕರ ಬೆಳೆಗಳನ್ನು ರಕ್ಷಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.











































Leave a Comment

Your email address will not be published. Required fields are marked *

error: Content is protected !!
Scroll to Top