ಸುಳ್ಯದ ರಂಗಮಯೂರಿ ಕಲಾಶಾಲೆ, ಪ್ರಣವ ಸೌಹಾರ್ದ ಸಹಕಾರಿ ಸಂಘ, ಮತ್ತು ಸುದ್ದಿ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿಕಸಿತ ಭಾರತದ ಕಡೆ ಮಕ್ಕಳ ನಡೆ ಎಂಬ ಧೈಯದೊಂದಿಗೆ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಸಂಕಲ್ಪ ಮಕ್ಕಳ ಹಬ್ಬ – 2026 ಅ.9ರಿಂದ 11ರವರೆಗೆ ಮೂರು ದಿನಗಳ ಕಾಲ ಸುಳ್ಯದ ಅಮರ ಶ್ರೀಭಾಗ್ ನ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ ಕಾರ್ಯಕ್ರಮ ಸಂಯೋಜಕರಾದ ಲೋಕೇಶ್ ಊರುಬೈಲು ಮತ್ತು ರಂಜಿತ್ ಅಡ್ತಲೆ ತಿಳಿಸಿದರು.
ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಸುಳ್ಯ ತಾಲೂಕು ಹಾಗೂ ಸುಳ್ಯ ತಾಲೂಕಿಗೆ ಹೊಂದಿಕೊಂಡಿರುವ ಗಡಿ ಗ್ರಾಮಗಳ ಎಲ್ಲಾ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಕಾರ್ಯಕ್ರಮ ಆಯೋಜನೆ ಮಾಡುವ ಉದ್ದೇಶದಿಂದ ಮಕ್ಕಳ ಹಬ್ಬ ಆಯೋಜನೆಗೊಂಡಿದ್ದು ಎಲ್ಲಾ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಮುಕ್ತ ಅವಕಾಶವಿದೆ.ಕಾರ್ಯಕ್ರಮದಲ್ಲಿ ಮಕ್ಕಳ ಸರ್ವತೊಮುಖ ಬೆಳವಣಿಗೆ ಮತ್ತು ವರ್ತಮಾನಕ್ಕೆ ಅನುಗುಣವಾಗಿ ನಾಡಿನ ಹೆಸರಾಂತ ಸಂಪನ್ಮೂಲ ವ್ಯಕ್ತಿಗಳ ಮೂಲಕ ಗುಣ ಮಟ್ಟದ ವಿಚಾರ ಸಂಕೀರ್ಣ, ಮಾರ್ಗದರ್ಶನ ಕಾರ್ಯಕ್ರಮಗಳು, ಸಾಧಕರಿಗೆ ಸನ್ಮಾನ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ – ಸಾಹಿತ್ಯ ಸ್ಪರ್ಧೆಗಳು, ವೇದಿಕೆ ಪ್ರದರ್ಶನಗಳು, ವಿಚಾರ ಗೋಷ್ಠಿಗಳು ನಡೆಯಲಿದೆ. ಮನೆಗೊಂದು ಗಿಡ ಪರಿಸರ ಜಾಗೃತಿ, ಮಕ್ಕಳ ಆರೋಗ್ಯಕರ ಆಹಾರ ಮೇಳ, ಪುಸ್ತಕ ಮೇಳ, ಹೂ – ಹಣ್ಣಿನ ಗಿಡಗಳ ಮಾರಾಟ ಮಳಿಗೆ, ಆರೋಗ್ಯ ತಪಾಸಣಾ ಶಿಬಿರ, ಮಕ್ಕಳ ಆಧಾರ್ ತಿದ್ದುಪಡಿ ಮತ್ತು ನೋಂದಣಿ, ಉಳಿತಾಯ ಜಾಗೃತಿಗಾಗಿ ಬ್ಯಾಂಕಿಂಗ್ ಸೇವಾ ಮಾಹಿತಿ, ಮಾವು, ಹಲಸು, ಅನನಾಸು ಹಣ್ಣಿನ ಹೋಲಿಗೆ ಸ್ಥಳದಲ್ಲೇ ತಯಾರಿ, ಪೋಷಕರಿಗಾಗಿ ವಿನೂತನ ಮಾಹಿತಿ ಕಾರ್ಯ ಗಾರ ಮಾತೃ ಸಂಗಮ ನಡೆಯಲಿದೆ. ಪ್ರತಿ ದಿನ ಸಂಜೆ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳು ವೇದಿಕೆಯಲ್ಲಿ ನಡೆಯಲಿದೆ.ತಾರಾಲಯ ಪ್ರದರ್ಶನ, ರೋಬೋಟ್ ಶೋ ನಡೆಯಲಿದೆ.ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ವಿಶೇಷ
ಆಕರ್ಷಣೆಯಾಗಿ ಮಕ್ಕಳಿಗೆ ರಿಯಾಯಿತಿ ದರದಲ್ಲಿ ಆಧುನಿಕ ತಾರಾಲಯ ಪ್ರದರ್ಶ ನಗಳು, ಕೃತಕ ಬುದ್ದಿಮತ್ತೆಯ ಯಾಂತ್ರಿಕ ಮಾನವ ಮತ್ತು ಶ್ವಾನ ಚಟುವಟಿಕೆಗಳು, ವರ್ಚುವಲ್ ರಿಯಾಲಿಟಿ ಶೋ ಜೊತೆಗೆ ಪಾರಂಪರಿಕ ವಸ್ತುಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ನಡೆಯಲಿದೆ.ಮೂರು ದಿನಗಳ ದಿನಗಳ ಕಾರ್ಯಕ್ರಮದಲ್ಲಿ ಎಲ್‌ಕೆಜಿಯಿಂದ ದ್ವಿತೀಯ
ಪಿಯುಸಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು ಜೊತೆಗೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಾಯೋಜಕತ್ವದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ. 3 ದಿನ ನಡೆಯುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿ ಅಂದಾಜು 10ರಿಂದ 12ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮ ಪ್ರಚಾರ ಸಮಿತಿ ಸಂಚಾಲಕ ಹರೀಶ್ ಬಂಟ್ವಾಳ್,ಸಂಯೋಜಕ ಯಶ್ವಿತ್ ಕಾಳಮನೆ,ವೇದಿಕೆ ಸಮಿತಿ ಸಂಚಾಲಕ ವೀರಪ್ಪ ಗೌಡ ಕಣ್ಕಲ್,ಸಾಂಸ್ಕೃತಿಕ ಸಮಿತಿ ಸಂಚಾಲಕ ಶಿವಪ್ರಸಾದ್ ಆಲೆಟ್ಟಿ ನವರಾಜ್ ಕಿರ್ಲಾಯ ಪಸ್ಥಿತರಿದ್ದರು.
ಅ.9 ರಿಂದ 11 ವರೆಗೆ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಮಕ್ಕಳ ಹಬ್ಬ-2026

























