ಶಿಕ್ಷಕರ ನೇಮಕಾತಿಗೆ ಮತ್ತೆ ಅವಕಾಶ: ಅರ್ಜಿ ಸಲ್ಲಿಕೆ ಗಡುವು ಅ.26ರವರೆಗೆ ವಿಸ್ತರಣೆ


ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಡಿ ನಡೆಯಲಿರುವ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಸುವ ಗಡುವನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಈ ಹಿಂದೆ ಸೆ.25ಕ್ಕೆ ಮುಕ್ತಾಯಗೊಳ್ಳಬೇಕಿದ್ದ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಇದೀಗ ಅ.26ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಲು ಅ.28ರವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಯೊಂದಿಗೆ ನೇಮಕಾತಿ ಪರೀಕ್ಷೆಯ ದಿನಾಂಕದಲ್ಲೂ ಬದಲಾವಣೆ ಮಾಡಲಾಗಿದೆ.
ಆನ್‌ಲೈನ್‌ ಮೂಲಕ ನಡೆಯಬೇಕಿದ್ದ ಪರೀಕ್ಷೆಯನ್ನು ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ನಡೆಸಲು ಇಲಾಖೆ ಉದ್ದೇಶಿಸಿದ್ದು, ಪರೀಕ್ಷೆಯ ನಿಖರ ದಿನಾಂಕವನ್ನು ನಂತರ ಪ್ರಕಟಿಸುವುದಾಗಿ ತಿಳಿಸಿದೆ.
ಶಾಲಾ ಶಿಕ್ಷಣ ಇಲಾಖೆ ಆ.12ರಂದು 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಆರಂಭದಲ್ಲಿ ಆ.18ರಿಂದ ಸೆ.7ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಬಳಿಕ ಅವಧಿ ವಿಸ್ತರಣೆ ಮಾಡಲಾಗಿತ್ತು.
ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ವಿವಾಹಿತ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿರುವುದರಿಂದ ಹೆಚ್ಚಿನ ಅಭ್ಯರ್ಥಿಗಳಿಗೆ ಅವಕಾಶ ಸಿಗುವಂತೆ ಮತ್ತೊಮ್ಮೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.
ನೇಮಕಾತಿಗೆ ಸಂಬಂಧಿಸಿದ ಪರಿಷ್ಕೃತ ವೇಳಾಪಟ್ಟಿ ಹಾಗೂ ಇತರ ಮಾಹಿತಿಯನ್ನು ಇಲಾಖೆಯ ಅಧಿಕೃತ ಪ್ರಕಟಣೆಗಳ ಮೂಲಕ ಪರಿಶೀಲಿಸಬಹುದಾಗಿದೆ











































Leave a Comment

Your email address will not be published. Required fields are marked *

error: Content is protected !!
Scroll to Top