ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕಲ್ಲಪಣೆ ನಿವಾಸಿ ರಾಮು (35) ಎಂಬವರು ನಾಪತ್ತೆಯಾಗಿರುವ ಕುರಿತು ಅವರ ಪತ್ನಿ ಸೆ.26ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಾಮು ಅವರು ಗುರುವಾರ ಬೆಳಗ್ಗೆ ಕೂಲಿ ಕೆಲಸಕ್ಕೆ ತೆರಳುವುದಾಗಿ ಮನೆಯಲ್ಲಿ ತಿಳಿಸಿ ಹೊರಟಿದ್ದರು. ಆದರೆ ಬಳಿಕ ಮನೆಗೆ ವಾಪಸ್ ಆಗದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ರಾಮು ಅವರಿಗೆ ಪಿಟ್ಸ್ ಕಾಯಿಲೆ ಹಾಗೂ ಮದ್ಯಪಾನ ಸೇವಿಸುವ ಅಭ್ಯಾಸವಿದ್ದು, ಅವರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ನಾಪತ್ತೆಯಾಗಿರುವ ರಾಮು ಅವರು ಕಪ್ಪು ಮೈಬಣ್ಣ, ಕೋಲು ಮುಖ ಹಾಗೂ ಸಪೂರ ಶರೀರ ಹೊಂದಿದ್ದು, ಮನೆಯಿಂದ ತೆರಳುವ ಸಂದರ್ಭದಲ್ಲಿ ಕೆಂಪು ಬಣ್ಣದ ಚೌಕುಳಿ ವಿನ್ಯಾಸದ ತುಂಬು ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಬರ್ಮುಡಾ ಚಡ್ಡಿ ಧರಿಸಿದ್ದರು.
ಈ ಕುರಿತು ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ರಾಮು ಅವರ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ. ರಾಮು ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಕೂಲಿ ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ವ್ಯಕ್ತಿ ನಾಪತ್ತೆ

























