ಡಾ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದ ಜನಜಾಗೃತಿ ವೇದಿಕೆ: ಸೆ.5ರಂದು ಸುಳ್ಯದಲ್ಲಿ ಗಾಂಧಿ ಸ್ಮೃತಿ–ಬೃಹತ್ ಜನಜಾಗೃತಿ ಜಾಥಾ

ಸುಳ್ಯ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದಕ್ಷಿಣ ಕನ್ನಡ–2ರ ನೇತೃತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸೆ.5ರಂದು ಸುಳ್ಯದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಜಾಥಾ ಕಾರ್ಯಕ್ರಮದ ಪ್ರಥಮ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಸಮರ್ಪಿಸಿ ಆಶೀರ್ವಾದ ಪಡೆಯಲಾಯಿತು.
ಜಿಲ್ಲಾಧ್ಯಕ್ಷ ವಿಶ್ವನಾಥ ರೈ ಕಳಂಜಾ ಅವರ ನೇತೃತ್ವದಲ್ಲಿ ಜಿಲ್ಲಾ ವೇದಿಕೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಆಮಂತ್ರಣ ಪತ್ರಿಕೆಯನ್ನು ನೀಡಿ, ಪೂಜ್ಯರ ಆಶೀರ್ವಾದ ಪಡೆದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪುತ್ತೂರು, ಜಿಲ್ಲಾ ಕಾರ್ಯದರ್ಶಿ ಬಾಬು ನಾಯ್ಕ, ಸುಳ್ಯ ತಾಲೂಕು ವೇದಿಕೆ ಅಧ್ಯಕ್ಷ ವೆಂಕಪ್ಪಗೌಡ, ಕಡಬ ತಾಲೂಕು ವೇದಿಕೆ ಅಧ್ಯಕ್ಷ ಇಂದುಶೇಖರ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಮಹೇಶ್ ಕುಮಾರ್, ಸುಳ್ಯ ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಜಿಲ್ಲಾ ವೇದಿಕೆಯ ಕೋ-ಆಪ್ಟ್ ಸದಸ್ಯ ವಿಶ್ವನಾಥ ಗೌಡ ಕಲ್ಲಂಬಿ, ಬೂಡು ರಾಧಾಕೃಷ್ಣ ರೈ, ತಾಲೂಕು ಯೋಜನಾಧಿಕಾರಿ ಮಾಧವ ಗೌಡ, ತಾಲೂಕು ವೇದಿಕೆಯ ಕೋ-ಆಪ್ಟ್ ಸದಸ್ಯರಾದ ಸುಬ್ಬ ಪಾಟಲಿ, ಪದ್ಮನಾಭ ಜೈನ್, ಮಲ್ಲೇಶ್ ಬೆಟ್ಟಂಪಾಡಿ, ಮಾಧವ ಚಾಂತಾಳ, ಸುಳ್ಯ ವಲಯದ ವಲಯಾಧ್ಯಕ್ಷ ಮನೋಹರ್ ಕೆ. ಹಾಗೂ ಗಿರೀಶ್ ಸೇರಿದಂತೆ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.











































Leave a Comment

Your email address will not be published. Required fields are marked *

error: Content is protected !!
Scroll to Top