September 2026

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ನಂದಗೋಕುಲ ಹಾಗೂ ಗುರುವಂದನಾ ಕಾರ್ಯಕ್ರಮ

ಸುಳ್ಯ, ಸೆ. 5: ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಜೆಸಿಐ ಸುಳ್ಯ ಪಯಸ್ವಿನಿ ಸಹಯೋಗದೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ “ನಂದಗೋಕುಲ” ಹಾಗೂ “ಗುರುವಂದನಾ” ಕಾರ್ಯಕ್ರಮವನ್ನು ಶನಿವಾರ ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮವು ಪುಟಾಣಿ ಬೇಬಿ ಪ್ರಿಯನ್ವಿಕಾ ಅವರ ಸುಂದರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಶ್ರೀಮತಿ ಸಂಗೀತಾ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಮುಖ್ಯ ಅತಿಥಿಗಳಾಗಿ JCI Sullia Payaswini ಅಧ್ಯಕ್ಷೆ ಶ್ರೀಮತಿ ಲತಾ ಸುಪ್ರೀತ್ ಮೊಂಟಡ್ಕ, ಶ್ರೀಮತಿ ತಾರಾ ಚೂಂತಾರ ಹಾಗೂ ಜೆಸಿಐ ಸದಸ್ಯ ಶ್ರೀ ವಿನೋದ್ ಮುಡಗದ್ದೆ ಅವರು ಭಾಗವಹಿಸಿ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ನಂದಗೋಕುಲ ಹಾಗೂ ಗುರುವಂದನಾ ಕಾರ್ಯಕ್ರಮ Read More »

ವಿದ್ಯಾರ್ಥಿಗಳ ಆಸಕ್ತಿಗೆ ಪೂರಕವಾದ ವಿಷಯದ ಬಗ್ಗೆ ಶಿಕ್ಷಣ ನೀಡುವುದೇ ನಿಜವಾದ ಶಿಕ್ಷಣ : ಶಾಸಕಿ ಭಾಗೀರಥಿ ಮುರುಳ್ಯ

ವಿದ್ಯಾರ್ಥಿಗಳ ಆಸಕ್ತಿಗೆ ಪೂರಕವಾದ ವಿಷಯದ ಬಗ್ಗೆ ಶಿಕ್ಷಣ ನೀಡುವುದೇ ನಿಜವಾದ ಶಿಕ್ಷಣ ಎಂದು ಶಾಸಕಿ ಭಾಗೀರಥಿ ಮುರುಳ್ಯ ಅಭಿಪ್ತಾಯಪಟ್ಟರು.ಶಾಲಾ ಶಿಕ್ಷಣ ಇಲಾಖೆ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಶ್ರೀ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಪದನಿಮಿತ್ತ ತಾಲೂಕು ಯೋಜನಾಧಿಕಾರಿಯವರ ಕಚೇರಿ ಸುಳ್ಯ ತಾಲೂಕು,ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆ ಯ ಸಮಿತಿ ಇದರ ಆಶ್ರಯದಲ್ಲಿ ಸುಳ್ಯ ಜೂನಿಯರ್ ಕಾಲೇಜು‌ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶಿಕ್ಷಕ ಪಠ್ಯವನ್ನು ಹೊರತುಪಡಿಸಿ ಇತರ

ವಿದ್ಯಾರ್ಥಿಗಳ ಆಸಕ್ತಿಗೆ ಪೂರಕವಾದ ವಿಷಯದ ಬಗ್ಗೆ ಶಿಕ್ಷಣ ನೀಡುವುದೇ ನಿಜವಾದ ಶಿಕ್ಷಣ : ಶಾಸಕಿ ಭಾಗೀರಥಿ ಮುರುಳ್ಯ Read More »

ಅರಂತೋಡು ಜಮಾಅತ್ ವತಿಯಿಂದ ಉಮ್ರಾ ಯಾತ್ರಾರ್ಥಿ ಮನ್ಸೂರ್ ಪಾರೆಕ್ಕಲ್ ಗೆ ಬೀಳ್ಕೊಡುಗೆ

ಅರಂತೋಡು ಬದ್ರಿಯಾ ಜಮಾಅತ್ ಸಮಿತಿಯ ನಿರ್ದೇಶಕರಾದ ಮನ್ಸೂರ್ ಪಾರೆಕ್ಕಲ್ ರವರು ಪವಿತ್ರ ಮಕ್ಕಾಕ್ಕೆ ಉಮ್ರಾ ಯಾತ್ರೆ ತೆರಳಲಿರುವುದರಿಂದ ಅವರನ್ನು ಅರಂತೋಡು ಬದ್ರಿಯಾ ಜುಮಾ ಮಸೀದಿ ಮತ್ತು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ ವತಿಯಿಂದ ಸೆ.4 ರಂದು ಬೀಳ್ಕೊಡಲಾಯಿತು. ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದರು. ದುವಾವನ್ನು ಖತೀಬರಾದ ಬಹು| ಆಸಿಫ್ ಅಝ್ ಹರಿ ನೆರವೇರಿಸಿದರು. ಕರ್ನಾಟಕ ಸರಕಾರದ ಕಾರ್ಮಿಕ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವದರ್ಜೆ ) ಟಿ.ಎಂ ಶಹೀದ್ ತೆಕ್ಕಿಲ್ ಮನ್ಸೂರ್

ಅರಂತೋಡು ಜಮಾಅತ್ ವತಿಯಿಂದ ಉಮ್ರಾ ಯಾತ್ರಾರ್ಥಿ ಮನ್ಸೂರ್ ಪಾರೆಕ್ಕಲ್ ಗೆ ಬೀಳ್ಕೊಡುಗೆ Read More »

ಕುಕ್ಕುಜಡ್ಕ : ಚಿರತೆ ಪ್ರತ್ಯಕ್ಷ

ಕುಕ್ಕುಜಡ್ಕ: ಪೈಲೂರು ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಸ್ಥಳೀಯ ನಿವಾಸಿ ಜಗದೀಶ್ ಪೈಲೂರು ಅವರು ಚಿರತೆಯನ್ನು ಗಮನಿಸಿರುವುದಾಗಿ ತಿಳಿದುಬಂದಿದೆ.ಗ್ರಾಮ ಪಂಚಾಯತ್ ಸಿಬ್ಬಂದಿ ಯಶವಂತ ಚಾಮಡ್ಕರ ಅವರು ವಾಟ್ಸಾಪ್ ಮೂಲಕ ನಿವಾಸಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಎರಡು–ಮೂರು ದಿನಗಳ ಹಿಂದೆ ಓಡ್ಯಪ್ಪ ನಾಯ್ಕ್ ಅವರ ನಾಯಿಗೆ ಚಿರತೆ ಕಚ್ಚಿರುವುದಾಗಿಯೂ ವರದಿಯಾಗಿದೆ. ಸಂಜೆ ಹಾಗೂ ರಾತ್ರಿ ವೇಳೆ ಒಂಟಿಯಾಗಿ ಸಂಚರಿಸದಂತೆ ಮತ್ತು ಮಕ್ಕಳು, ಸಾಕುಪ್ರಾಣಿಗಳನ್ನು ಸುರಕ್ಷಿತವಾಗಿರಿಸುವಂತೆ ಸೂಚಿಸಲಾಗಿದೆ. ಚಿರತೆ ಕಂಡುಬಂದಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ಕುಕ್ಕುಜಡ್ಕ : ಚಿರತೆ ಪ್ರತ್ಯಕ್ಷ Read More »

ಕಿಶೋರ್ ಕುಮಾರ್ ಕಿರ್ಲಾಯ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಅರಂತೋಡು : ಆರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಸಹ ಶಿಕ್ಷಕ ಕಿಶೋರ್ ಕುಮಾರ್ ಕೆ. ಅವರು ಶಿಕ್ಷಣ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಲ್ಲಿಸಿದ ಸುದೀರ್ಘ ಸೇವೆಯನ್ನು ಪರಿಗಣಿಸಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆರಂತೋಡು ಗ್ರಾಮದ ಕಿರ್ಲಾಯ ನಿವಾಸಿಯಾಗಿರುವ ಕಿಶೋರ್ ಕುಮಾರ್ ಅವರು ಕಿರ್ಲಾಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಆರಂತೋಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ

ಕಿಶೋರ್ ಕುಮಾರ್ ಕಿರ್ಲಾಯ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ Read More »

ಸೆ.13 ; ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಂಪಾಜೆ ವಲಯದ ಒಕ್ಕೂಟಗಳ ಪದಗ್ರಹಣ ಸಮಾರಂಭ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಂಪಾಜೆ ವಲಯದ ನಾಲ್ಕು ಒಕ್ಕೂಟಗಳ ಪದಗ್ರಹಣ ಸಮಾರಂಭ ಸೆಪ್ಟಂಬ‌ರ್ 13ರಂದು ಅರಂತೋಡು ತೆಕ್ಕಿಲ್ ಸಭಾಭವನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸೆಪ್ಟೆಂಬರ್ 4ರಂದು ಅರಂತೋಡು ದುರ್ಗಾ ಮಾತ ಭಜನಾ ಮಂದಿರದಲ್ಲಿ ನಡೆಯಿತು.ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ಹರೀಶ್ ಆಚಾರ್ಯ, ಭಜನಾ ಪರಿಷತ್ ವಲಯ ಅಧ್ಯಕ್ಷರಾದ ಭಾರತಿ ಉಳುವಾರು, ಭಜನಾ ಮಂಡಳಿ ಕಾರ್ಯದರ್ಶಿ ಸುರೇಶ್ ಉಳುವಾರು, ಪದಾಧಿಕಾರಿಗಳಾದ ಶ್ರೀ ಕುಶಾಲಪ್ಪ ಟೈಲರ್ ಬೆಟ್ಟನ ಹಾಗೂ ಪುಂಡರೀಕ

ಸೆ.13 ; ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಂಪಾಜೆ ವಲಯದ ಒಕ್ಕೂಟಗಳ ಪದಗ್ರಹಣ ಸಮಾರಂಭ Read More »

ಭಾರತೀಯ ಭೂ ಸೇನೆಯ ನಿವೃತ್ತ ಸೈನಿಕ, ಅಮೆಚೂರು ಎ.ಎಸ್.ಮಹಾಬಲ ಗೌಡ ನಿಧನ

ಭಾರತೀಯ ಭೂ ಸೇನೆಯ ನಿವೃತ್ತ ಸೈನಿಕ, ಪೆರಾಜೆ ಗ್ರಾಮದ ಅಮೆಚೂರು ನಿವಾಸಿ ಎ.ಎಸ್.ಮಹಾಬಲ ಗೌಡ(82) ಸೆ.3 ರಂದು ನಿಧನರಾದರು.ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿದ್ದರು.ನಿವೃತ್ತಿಯ ನಂತರ 24 ವರ್ಷ ವಿಜಯ ಬ್ಯಾಂಕ್ ನಲ್ಲಿ ಸೇವೆ ಸಲ್ಲಿಸಿದ್ದರು.

ಭಾರತೀಯ ಭೂ ಸೇನೆಯ ನಿವೃತ್ತ ಸೈನಿಕ, ಅಮೆಚೂರು ಎ.ಎಸ್.ಮಹಾಬಲ ಗೌಡ ನಿಧನ Read More »

ಸುಳ್ಯ ಬಸ್ ಘಟಕಕ್ಕೆ ನೂತನ ಬಸ್ ಒದಗಿಸುವಂತೆ ಸಾರಿಗೆ ಸಚಿವರಿಗೆ ಸುಳ್ಯ ಶಾಸಕರ ಮನವಿ

ಬಸ್ ಘಟಕದಲ್ಲಿ ಬಸ್‌ಗಳು ಹಾಗೂ ಸಿಬ್ಬಂದಿಗಳ ಕೊರತೆ ಇರುವುದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.​ಆದ್ದರಿಂದ ಸುಳ್ಯ ಬಸ್ ಘಟಕಕ್ಕೆ 10 ಹೊಸ ಬಸ್‌ಗಳನ್ನು ಮತ್ತು ಚಾಲಕ ಮತ್ತು ನಿರ್ವಾಹಕರನ್ನು ನೇಮಿಸಬೇಕೆಂದು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಸಾರಿಗೆ ಸಚಿವರಿಗೆ ಮನವಿಯಲ್ಲಿ ಕೋರಿದ್ದಾರೆ .ಅದಕ್ಕೆ ಪ್ರತಿಯಾಗಿ ಸಚಿವರು ಇನ್ನು6 ತಿಂಗಳಿನಲ್ಲಿ ಸರಕಾರಕ್ಕೆ ಹೊಸಬಸ್ಸುಗಳು ಹಸ್ತಾಂತರವಾಗಲಿದ್ದು ನಂತರ ಬಸ್ಸುಗಳನ್ನು ಮತ್ತು ಸಿಬಂದಿಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಸುಳ್ಯ ಬಸ್ ಘಟಕಕ್ಕೆ ನೂತನ ಬಸ್ ಒದಗಿಸುವಂತೆ ಸಾರಿಗೆ ಸಚಿವರಿಗೆ ಸುಳ್ಯ ಶಾಸಕರ ಮನವಿ Read More »

ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿ: ಡಾ. ಅನುರಾಧಾ ಕುರುಂಜಿ

ಸುಳ್ಯ: ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿಯಾಗಿದ್ದು, ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹಾಗೂ ವಲಯ ತರಬೇತುದಾರರಾದ ಡಾ. ಅನುರಾಧಾ ಕುರುಂಜಿ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಜ್ಜಾವರ ವಲಯ ಹಾಗೂ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಅಜ್ಜಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ. 3ರಂದು ಸುಳ್ಯದ

ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿ: ಡಾ. ಅನುರಾಧಾ ಕುರುಂಜಿ Read More »

ನಾಲ್ಕೂರು ಗ್ರಾಮಸ್ಥರಿಂದ ಕಸ್ತೂರಿರಂಗನ್ ವರದಿ ವಿರುದ್ಧ ಪ್ರತಿಭಟನೆ

ಗುತ್ತಿಗಾರು : ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆಯ ವಿರುದ್ಧ ನಾಲ್ಕೂರು ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಗುತ್ತಿಗಾರು ಗ್ರಾಮ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸಿ, ಪಂಚಾಯತ್‌ಗೆ ಆಕ್ಷೇಪಣಾ ಪತ್ರ ಸಲ್ಲಿಸಿದರು.ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ನಡೆದ ಹೋರಾಟವು ಕಾನೂನುಬದ್ಧ ಹಾಗೂ ಪ್ರಜಾಪ್ರಭುತ್ವದ ಮಾರ್ಗದಲ್ಲಿ ಮುಂದುವರಿಯಲಿದೆ ಎಂದು ತಿಳಿಸಲಾಯಿತು. ಮಲೆನಾಡಿನಲ್ಲಿ ಹೆಚ್ಚುತ್ತಿರುವ ಆನೆ ದಾಳಿ ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದ ರೈತರು

ನಾಲ್ಕೂರು ಗ್ರಾಮಸ್ಥರಿಂದ ಕಸ್ತೂರಿರಂಗನ್ ವರದಿ ವಿರುದ್ಧ ಪ್ರತಿಭಟನೆ Read More »

error: Content is protected !!
Scroll to Top