September 2026

ಜವಾಬ್ದಾರಿಯಿಲ್ಲದ ವಿದ್ಯಾರ್ಥಿತನ — ಭವಿಷ್ಯದ ಬದುಕಿಗೆ ಮಾರಕವಾಗಬಹುದೇ?

“ಇಂದಿನ ವಿದ್ಯಾರ್ಥಿಗಳಿಗೆ ಜವಾಬ್ದಾರಿ ಇಲ್ಲ”, “ಕೆಲವರು ವಿದ್ಯಾರ್ಥಿತನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ” ಎಂಬ ಮಾತುಗಳನ್ನು ಅನೇಕ ಸಂದರ್ಭಗಳಲ್ಲಿ ನಾವು ಕೇಳುತ್ತಿರುತ್ತೇವೆ. ಆದರೆ ಜವಾಬ್ದಾರಿಯಿಲ್ಲದ ವಿದ್ಯಾರ್ಥಿತನ ಎಂದರೇನು? ಅದು ಹೇಗೆ ರೂಪುಗೊಳ್ಳುತ್ತದೆ? ಭವಿಷ್ಯದ ಬದುಕಿನ ಮೇಲೆ ಅದರ ಪರಿಣಾಮವೇನು? ಎಂಬುದನ್ನು ಅರ್ಥಮಾಡಿಕೊಳ್ಳುವುದು ಮುಖ್ಯ. ಇದನ್ನು ಅರಿತಾಗ ಮಾತ್ರ ಜವಾಬ್ದಾರಿಯುತ ವಿದ್ಯಾರ್ಥಿಗಳನ್ನು ರೂಪಿಸಲು ಸಾಧ್ಯ. ವಿದ್ಯಾರ್ಥಿ ಜೀವನವು ಪ್ರತಿಯೊಬ್ಬರ ಬದುಕಿನ ಅತ್ಯಂತ ಅಮೂಲ್ಯವಾದ ಹಂತ. ಜ್ಞಾನ ಪಡೆಯಲು, ಒಳ್ಳೆಯ ಅಭ್ಯಾಸಗಳನ್ನು ಬೆಳೆಸಿಕೊಳ್ಳಲು, ತಪ್ಪುಗಳಿಂದ ಕಲಿಯಲು ಮತ್ತು ಭವಿಷ್ಯಕ್ಕೆ ಅಗತ್ಯವಾದ ಗುಣಗಳನ್ನು ರೂಪಿಸಿಕೊಳ್ಳಲು ಇದು

ಜವಾಬ್ದಾರಿಯಿಲ್ಲದ ವಿದ್ಯಾರ್ಥಿತನ — ಭವಿಷ್ಯದ ಬದುಕಿಗೆ ಮಾರಕವಾಗಬಹುದೇ? Read More »

ಜನಪ್ರತಿನಿಧಿ–ಅಧಿಕಾರಿಗಳ ಹೊಂದಾಣಿಕೆಯಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ ಶಾಸಕಿ ಭಾಗೀರಥಿ ಮುರುಳ್ಯ

ಅರಂತೋಡು, ಸೆ. 18: ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವೆ ಉತ್ತಮ ಹೊಂದಾಣಿಕೆ ಇದ್ದಾಗ ಗ್ರಾಮವು ಸಮಗ್ರವಾಗಿ ಅಭಿವೃದ್ಧಿಗೊಳ್ಳಲು ಸಾಧ್ಯ ಎಂದು ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಹೇಳಿದರು.ಅರಂತೋಡು ಗ್ರಾಮ ಪಂಚಾಯತ್‌ನಲ್ಲಿ ಕಳೆದ 9 ವರ್ಷಗಳಿಂದ ಜನಸ್ನೇಹಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಪಿಡಿಒ ಜಯಪ್ರಕಾಶ್ ಅವರ ಬೀಳ್ಕೊಡುಗೆ ಸಮಾರಂಭ, ನೂತನವಾಗಿ ಆಗಮಿಸಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಸ್ವಾಗತ ಹಾಗೂ ಘನತ್ಯಾಜ್ಯ ಘಟಕದ ಸ್ಥಳಾಂತರ ಕಾರ್ಯಕ್ರಮದಲ್ಲಿ ನೂತನವಾಗಿ ಸ್ಥಳಾಂತರಿಸಲಾದ ಘನತ್ಯಾಜ್ಯ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅರಂತೋಡು

ಜನಪ್ರತಿನಿಧಿ–ಅಧಿಕಾರಿಗಳ ಹೊಂದಾಣಿಕೆಯಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ ಶಾಸಕಿ ಭಾಗೀರಥಿ ಮುರುಳ್ಯ Read More »

ಸಂಪಾಜೆ-ಕಲ್ಲುಗುಂಡಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

ಸಂಪಾಜೆ, ಸೆ.18: ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಸಂಪಾಜೆ-ಕಲ್ಲುಗುಂಡಿ ಇದರ ಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷೆ ದೇವಕಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.ಸಂಜೀವಿನಿ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಭೆಯು ರಾಷ್ಟ್ರಗೀತೆಯೊಂದಿಗೆ ಸಮಾರೋಪಗೊಂಡಿತು. ಸಭೆಯಲ್ಲಿ ತಾಲೂಕು ಪಂಚಾಯತ್‌ನ ವಲಯ ಮೇಲ್ವಿಚಾರಕಿ ಶ್ರೀಮತಿ ರೂಪ ಅವರು ಭಾಗವಹಿಸಿ ಲೋಕೋಸ್ ಹಾಗೂ ಇ-ಕೆವೈಸಿ ಕುರಿತು ಮಾಹಿತಿ ನೀಡಿದರು.ಸಭೆಯಲ್ಲಿ ಅಕ್ಕ ಕೆಫೆ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ

ಸಂಪಾಜೆ-ಕಲ್ಲುಗುಂಡಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ Read More »

ಅರಂತೋಡು ಅನ್ವಾರುಲ್ ಹುಧಾ ಎಸೋಸಿಯೇಸನ್ ವತಿಯಿಂದ ಪಿ.ಡಿ.ಒ ಜಯಪ್ರಕಾಶ್ ರಿಗೆ ಸನ್ಮಾನ

ಅರಂತೋಡು ಗ್ರಾಮ ಪಂಚಾಯತ್ ಅಭಿವ್ರದ್ಧಿ ಅಧಿಕಾರಿಯಾಗಿ ಸುಧೀರ್ಘ 9 ವರ್ಷಗಳ ಸೇವೆ ಸಲ್ಲಿಸಿ ಜನಸ್ನೇಹಿ ಅಧಿಕಾರಿಯಾಗಿದ್ದ ಪಿ.ಡಿ.ಒ ಜಯಪ್ರಕಾಶ್ ಎಂ.ಆರ್ ರವರನ್ನು ಸೆ.17 ರಂದು ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ವತಿಯಿಂದ ಅಧ್ಯಕ್ಷರಾದ ಅಮೀರ್ ಕುಕ್ಕುಂಬಳ ಕಾರ್ಯದರ್ಶಿ ಪಸೀಲು, ಕೋಶಾಧಿಕಾರಿ ಸಂಶುದ್ಧೀನ್ ಪೆಲ್ತಡ್ಕ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ಗ್ರಾ.ಪಂ.ನಿಕಟ ಪೂರ್ವ ಅಧ್ಯಕ್ಷ ಕೇಶವ ಅಡ್ತಲೆ, ನಿವೃತ್ತ ಪ್ರಾಂಶುಪಾಲ ಕೆ.ಆರ್ ಗಂಗಾಧರ್, ಸಹಕಾರಿ ಸಂಘದ 

ಅರಂತೋಡು ಅನ್ವಾರುಲ್ ಹುಧಾ ಎಸೋಸಿಯೇಸನ್ ವತಿಯಿಂದ ಪಿ.ಡಿ.ಒ ಜಯಪ್ರಕಾಶ್ ರಿಗೆ ಸನ್ಮಾನ Read More »

ಮೋದಿಯವರ ಹುಟ್ಟುಹಬ್ಬ: ಅರಂತೋಡಿನಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸಿ ಪ್ರಾರ್ಥನೆ

ಅರಂತೋಡು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಹಾಗೂ ರಾಷ್ಟ್ರ ಸಮರ್ಪಿತ ಜನಸೇವೆಯ ಸಾರ್ಥಕ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಸೇವಾ ಸಂಕಲ್ಪದ ಅಂಗವಾಗಿ ಅರಂತೋಡು ಶ್ರೀ ದುರ್ಗಾ ಮಾತಾ ಭಜನಾ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.ಮೋದಿಜಿ ಅವರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಹಾಗೂ ದೇಶಕ್ಕೆ ಉತ್ತಮ ಆಡಳಿತ ನೀಡಲು ಅಗತ್ಯವಾದ ಶಕ್ತಿ ಮತ್ತು ಚೈತನ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸಲಾಯಿತು. ಅಲ್ಲದೆ, 2047ರ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿಸುವ ಸಂಕಲ್ಪ ಸಾಕಾರಗೊಳ್ಳಲಿ ಎಂದು ಆಶಯ ವ್ಯಕ್ತಪಡಿಸಲಾಯಿತು.ಈ

ಮೋದಿಯವರ ಹುಟ್ಟುಹಬ್ಬ: ಅರಂತೋಡಿನಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸಿ ಪ್ರಾರ್ಥನೆ Read More »

ಮೋದಿಯವರ ಹುಟ್ಟುಹಬ್ಬ: ತೊಡಿಕಾನ ಮಲ್ಲಿಕಾರ್ಜುನ ದೇವಾಲಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯರಿಂದ ವಿಶೇಷ ಪೂಜೆ

ತೊಡಿಕಾನ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ಗುರುವಾರ ಬೆಳಗ್ಗೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಭಗವಂತನು ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶವನ್ನು ಮುನ್ನಡೆಸಲು ಅಗತ್ಯವಿರುವ ಅಪಾರ ಶಕ್ತಿ–ಸಾಮರ್ಥ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.ದೇಶದ ಪ್ರಗತಿ, ಸುರಕ್ಷತೆ ಹಾಗೂ ಪ್ರತಿಯೊಬ್ಬ ಪ್ರಜೆಯ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿಯವರು ಕೈಗೊಳ್ಳುವ ಪ್ರತಿಯೊಂದು ನಿರ್ಧಾರಕ್ಕೂ ದೈವಿಕ ಮಾರ್ಗದರ್ಶನ ಮತ್ತು ಆಶೀರ್ವಾದ ಸದಾ ಇರಲಿ. ‘ವಿಶ್ವಗುರು ಭಾರತ’ದ

ಮೋದಿಯವರ ಹುಟ್ಟುಹಬ್ಬ: ತೊಡಿಕಾನ ಮಲ್ಲಿಕಾರ್ಜುನ ದೇವಾಲಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯರಿಂದ ವಿಶೇಷ ಪೂಜೆ Read More »

ಕಸ್ತೂರಿ ರಂಗನ್ ವರದಿಯಿಂದ ರೈತರಿಗೆ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ : ಡಿ.ಕೆ.ಶಿ

ಮಂಗಳೂರು: ಪಶ್ಚಿಮ ಘಟ್ಟ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿಯಿಂದ ಕರಾವಳಿ ಹಾಗೂ ಮಲೆನಾಡು ಭಾಗದ ರೈತರು ಮತ್ತು ಸ್ಥಳೀಯ ನಿವಾಸಿಗಳ ಬದುಕಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಲು ಅಥವಾ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು ಗುರುವಾರ ಸಂಜೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ

ಕಸ್ತೂರಿ ರಂಗನ್ ವರದಿಯಿಂದ ರೈತರಿಗೆ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ : ಡಿ.ಕೆ.ಶಿ Read More »

ಹುಟ್ಟೂರಿನ ಗೌರವ ಕಲಾವಿದನಿಗೆ ಬಹಳ ಹೆಮ್ಮೆ ತರುವ ವಿಚಾರ -ಶಶಿಧರ ಕೋಟೆ

ಅಮ್ಮನ ಪ್ರೀತಿ ಮತ್ತು ಹುಟ್ಟೂರಿನ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ. ಒಬ್ಬ ಕಲಾವಿದನಿಗೆ ಹುಟ್ಟೂರಿನ ಗೌರವ ಬಹಳ ಹೆಮ್ಮೆ ತರುವ ವಿಚಾರ ಎಂದುಗಾನಗಂಧರ್ವ ಖ್ಯಾತಿಯ ಗಾಯಕ, ಸಂಗೀತ ನಿರ್ದೇಶಕರು ಹಾಗೂ ಚಲನಚಿತ್ರ ನಟರಾದ ಶಶಿಧರ ಕೋಟೆ ಆಶಯ ವ್ಯಕ್ತಪಡಿಸಿದ್ದಾರೆ. ಜೆಸಿಐ ಸುಳ್ಯ ಪಯಸ್ವಿನಿ ಮತ್ತು ಪಯಸ್ವಿನಿಜೇಸಿಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜೇಸಿಐ ಸಪ್ತಾಹ ೨೦೨೬ ‘ಸುಸ್ನಿಲ’ ಸಮಾರೋಪ ಸಮಾರಂಭದಲ್ಲಿ  ಕಲಾಶ್ರೀಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಎಲ್ಲಾ ಭಾಷೆಗಳನ್ನು ಆರಾಧಿಸೋಣ, ಆದರೆ ಕನ್ನಡವನ್ನು ಪ್ರೀತಿಸೋಣ, ಕನ್ನಡ ನಮ್ಮೆಲ್ಲರ  ಹೃದಯದ

ಹುಟ್ಟೂರಿನ ಗೌರವ ಕಲಾವಿದನಿಗೆ ಬಹಳ ಹೆಮ್ಮೆ ತರುವ ವಿಚಾರ -ಶಶಿಧರ ಕೋಟೆ Read More »

ಸುಳ್ಯ–ತೊಡಿಕಾನ ನಡುವೆ ಕೆಎಸ್‌ಆರ್‌ಟಿಸಿ ನೂತನ ಬಸ್ ಸೇವೆಗೆ ಚಾಲನೆ

ಸುಳ್ಯ: ಸುಳ್ಯದಿಂದ ತೊಡಿಕಾನಕ್ಕೆ ನೂತನ ಕೆಎಸ್‌ಆರ್‌ಟಿಸಿ ಬಸ್ ಸೇವೆ ಸೆ.16ರಿಂದ ಆರಂಭಗೊಂಡಿದ್ದು, ಹಲವು ವರ್ಷಗಳಿಂದ ಈ ಭಾಗದ ಜನರು ಹೊಂದಿದ್ದ ಸಾರಿಗೆ ಸೌಲಭ್ಯದ ಬೇಡಿಕೆಗೆ ಸ್ಪಂದನೆ ದೊರೆತಂತಾಗಿದೆ.ಸುಳ್ಯ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕಿ ಕು. ಭಾಗೀರಥಿ ಮುರುಳ್ಯ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ನೂತನ ಬಸ್ ಸೇವೆಗೆ ಚಾಲನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ

ಸುಳ್ಯ–ತೊಡಿಕಾನ ನಡುವೆ ಕೆಎಸ್‌ಆರ್‌ಟಿಸಿ ನೂತನ ಬಸ್ ಸೇವೆಗೆ ಚಾಲನೆ Read More »

‘ಟ್ರಾಫಿಕ್ ಅವ್ಯವಸ್ಥೆ ಬಗ್ಗೆ ಪ್ರಶ್ನಿಸುವುದೇ ಕೋಮು ಬಣ್ಣವೇ?’ – ಸುಬೋಧ್ ಶೆಟ್ಟಿ ಮೇನಾಲ ಪ್ರಶ್ನೆ!

ಸುಳ್ಯ: ಸುಳ್ಯ ತಾಲೂಕು ಮಿಲಾದ್ ಸಮಿತಿಯವರು ವಿನಯ್ ಕುಮಾರ್ ಕಂದಡ್ಕ ಅವರ ಹೇಳಿಕೆ ಕುರಿತು ನಡೆಸಿದ ಪತ್ರಿಕಾಗೋಷ್ಠಿಯನ್ನು ಗಮನಿಸಿದಾಗ ಗಲಿಬಿಲಿಯಾಯಿತು. ಕಂದಡ್ಕ ಅವರು ನೀಡಿರುವ ಪತ್ರಿಕಾ ಹೇಳಿಕೆಯನ್ನು ಮೂರು–ನಾಲ್ಕು ಬಾರಿ ಓದಿದ್ದರೂ, ಅದರಲ್ಲಿ ಅಸಹಜವಾದ ಅಥವಾ ಕೋಮು ಸೌಹಾರ್ದಕ್ಕೆ ಧಕ್ಕೆ ತಂದು ಅಶಾಂತಿ ಸೃಷ್ಟಿಸುವಂತಹ ಯಾವುದೇ ಅಂಶ ಕಂಡುಬರಲಿಲ್ಲ ಎಂದು ಬಿಜೆಪಿ ಸುಳ್ಯ ಮಂಡಲದ ಕೋಶಾಧಿಕಾರಿ ಸುಬೋಧ್ ಶೆಟ್ಟಿ ಮೇನಾಲ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ನಗರದಲ್ಲಿ ಮೊನ್ನೆ ಸಂಜೆ 4ರಿಂದ 7 ಗಂಟೆಯವರೆಗೆ ಟ್ರಾಫಿಕ್ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು,

‘ಟ್ರಾಫಿಕ್ ಅವ್ಯವಸ್ಥೆ ಬಗ್ಗೆ ಪ್ರಶ್ನಿಸುವುದೇ ಕೋಮು ಬಣ್ಣವೇ?’ – ಸುಬೋಧ್ ಶೆಟ್ಟಿ ಮೇನಾಲ ಪ್ರಶ್ನೆ! Read More »

error: Content is protected !!
Scroll to Top