ಜ್ಯೋತಿ ಪ್ರೌಢ ಶಾಲೆಯಲ್ಲಿ ಇಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಜಯಂತಿ ಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಶ್ರೀಮಹೇಶ್ ಕುಮಾರ್ ಮೇನಾಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪೋಷಕ ಸಮಿತಿಯ ಅಧ್ಯಕ್ಷರಾದ ಜಯಪ್ರಕಾಶ್ ಸುಳ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ಸಿಬ್ಬಂಧಿಗಳು.ಹಾಜರಿದ್ದರು. ವಿದ್ಯಾರ್ಥಿಗಳು ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ನಾಗರಾಜು ಜಿ ಆರ್ ಮತ್ತು ಶ್ರೀ ಅಶೋಕ್ ಪೀಚೆ ಉಪಸ್ಥಿತರಿದ್ದರು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ವರ ಬಗ್ಗೆ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕಿ ಅರ್ಚನಕುಮಾರಿ ಕೆ ವಿ ಮಾತನಾಡಿ ಸತ್ಯ ಮತ್ತು ಅಹಿಂಸೆ, ಗಾಂಧೀಜಿಯವರ ಬಾಲ್ಯ ಜೀವನದ ಬಗ್ಗೆ ವಿವರಿಸಿದರು. ರಾಷ್ಟ್ರ ನಾಯಕ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಬಗ್ಗೆ ಶಾಲಾ ಮುಖ್ಯ ಶಿಕ್ಷಕರಾದ ನಾಗರಾಜ್ ಜಿ ಆರ್ ರವರು ಮಾತನಾಡಿ ಬಾಲ್ಯ ಜೀವನದ ಕಡುಬಡತನದ ಅವರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿ, ಎಲ್ಲಾ ವಿದ್ಯಾರ್ಥಿಗಳನ್ನು ಪ್ರಾಮಾಣಿಕತೆ, ಮುಖ್ಯ ವಾದ ಅಂಗ ಎಂದು ತಿಳಿಸಿದರು. ಶಾಲಾ ವಿದ್ಯಾರ್ಥಿ ಧನುಷ್ ಗೌಡ ಪ್ರಾರ್ಥಿಸಿ , ಪೋಷಕ ಸಮಿತಿ ಅಧ್ಯಕ್ಷರಾದ ಜಯಪ್ರಕಾಶ್ ಸುಳ್ಯ ಹಾಗೂ ಶಾಲಾ ಸಂಚಾಲಕರಾದ ಮಹೇಶ್ ಕುಮಾರ್ ದೀಪ ಪ್ರಜ್ವಲನೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ
ನೀಡಿದರು. ಇಂಗ್ಲೀಷ್ ಭಾಷಾ ಶಿಕ್ಷಕಿ ಸುಪರ್ಣ ಕೆ ಎಸ್ ಸ್ವಾಗತಿಸಿ. ಶಾಲಾ ಕಚೇರಿ ಅಧೀಕ್ಷಕಿ ಚಂದ್ರಮತಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ನಿತಿನ್ ಎಂಎಂ ಸರ್ವರಿಗೂ ವಂದಿಸಿದರು
ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ಗಾಂಧಿಜಯಂತಿ ಆಚರಣೆ








































