ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ – ಸ್ವಚ್ಛತಾ ಅಭಿಯಾನ

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಗಾಂಧಿ ಜಯಂತಿ ಆಚರಣೆ ಅಂಗವಾಗಿ ಸುಳ್ಯದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಅ. 02 ರಂದು ನಡೆಯಿತು.









































































ಜೇಸಿಐ ಸುಳ್ಯ ಪಯಸ್ವಿನಿಯ
ಘಟಕಾಧ್ಯಕ್ಷರಾದ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಲಯನ್ಸ್ ಕ್ಲಬ್ ಸುಳ್ಯ ಇದರ ಅಧ್ಯಕ್ಷರಾದ ಲ. ವಿನೋದ್ ಲಾಸ್ರಾದೊ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ತರಬೇತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.
ನಿಲಯ ಮೇಲ್ವಿಚಾರಕರಾದ ಶ್ರೀಮತಿ ಗೀತಾ ಉಪಸ್ಥಿತರಿದ್ದು ಶುಭ ಹಾರೈಸಿದರು.
ಈ ಸಂಧರ್ಭದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಆಶುಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ವಿಜೇತರಿಗೆ ಬಹುಮಾನ ವಿತರಿಸಲಾಯಿತು ಹಾಗೂ ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷರು ನಿಲಯದ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.

ಪೂರ್ವಾಧ್ಯಕ್ಷರಾದ ಜೆಎಪ್ಎಂ
ಗುರುಪ್ರಸಾದ್ ನಾಯಕ್ ಅತಿಥಿಗಳನ್ನು ವೇದಿಕೆಗೆ ಅಹ್ವಾನಿಸಿದರು.
ಜೇಸಿ ಪ್ರಸನ್ನ ಎಂ. ಆರ್ ಜೇಸಿ ವಾಣಿ ವಾಚಿಸಿದರು. ಕಾರ್ಯದರ್ಶಿ ತಾರಾ ಚೂಂತಾರು ವಂದಿಸಿದರು. .

ಸಭಾ ಕಾರ್ಯಕ್ರಮದ ಬಳಿಕ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಸಾಮಾಜಿಕ ಮುಖಂಡ ಸುಪ್ರೀತ್ ಮೋಂಟಡ್ಕ, ನಿಲಯದ ಸಿಬ್ಬಂದಿಗಳು, ಜೇಸಿ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top