ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೆಆರ್‌ಎಸ್ ಪಕ್ಷದ ವತಿಯಿಂದ ಗಾಂಧಿ ಜಯಂತಿಯನ್ನು ಮಂಗಳೂರಿನಲ್ಲಿ ಆಚರಿಸಲಾಯಿತು.
ನಗರದ ಕದ್ರಿ ಪಾರ್ಕ್‌ನಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾ ಉಪಾಧ್ಯಕ್ಷ ರೋಷನ್ ಲೋಬೋ, ಮಹಾತ್ಮ ಗಾಂಧೀಜಿಯವರು ತಮ್ಮ ಜೀವನದುದ್ದಕ್ಕೂ ಸತ್ಯ ಮತ್ತು ಅಹಿಂಸೆಯನ್ನು ಪ್ರಬಲ ಅಸ್ತ್ರಗಳನ್ನಾಗಿ ಬಳಸಿಕೊಂಡು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕೆಆರ್‌ಎಸ್ ಪಕ್ಷವು ಗಾಂಧೀಜಿಯವರ ತತ್ವ ಮತ್ತು ಸಿದ್ಧಾಂತಗಳಿಗೆ ಅನುಗುಣವಾಗಿ ನಿಷ್ಠೆ, ಪ್ರಾಮಾಣಿಕತೆ ಹಾಗೂ ಸತ್ಯದ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಉದ್ದೇಶದೊಂದಿಗೆ ಪಕ್ಷದ ಕಾರ್ಯಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು.
ನಂತರ ಮಂಗಳೂರಿನ ಲಾಲ್‌ಬಾಗ್‌ನಲ್ಲಿರುವ ಮಹಾನಗರ ಪಾಲಿಕೆ ಕಚೇರಿಯ ಎದುರಿನ ಗಾಂಧೀಜಿ ಪ್ರತಿಮೆಗೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.








































