ಸುಳ್ಯ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಅ.11ರಿಂದ 20ರವರೆಗೆ ನವರಾತ್ರಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.ಪ್ರತಿದಿನ ಸಂಜೆ 6ರಿಂದ ರಾತ್ರಿ 8.30ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಭಜನೆ, ಕಲಾಸೇವೆ, ವಾಹನ ಪೂಜೆ ಸೇರಿದಂತೆ ವಿವಿಧ ಸೇವೆಗಳು ನಡೆಯಲಿದ್ದು, ಬಳಿಕ ಭಕ್ತರಿಗೆ ಅನ್ನಪ್ರಸಾದ ಭೋಜನದ ವ್ಯವಸ್ಥೆ ಮಾಡಲಾಗಿದೆ.ನವರಾತ್ರಿ ಅವಧಿಯಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ದೇವಿಯ ಕೃಪೆಗೆ ಪಾತ್ರರಾಗುವುದರೊಂದಿಗೆ ಅನ್ನಪ್ರಸಾದ ಸ್ವೀಕರಿಸುವಂತೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು ವಿನಂತಿಸಿದ್ದಾರೆ.
ಪಂಜ ದೇವಸ್ಥಾನದಲ್ಲಿ ಅ.11 ರಿಂದ ನವರಾತ್ರಿ ಪೂಜೆ











