ಎಡಮಂಗಲ ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಎಡಮಂಗಲ: ಪ್ರಜಾಧ್ವನಿ ಕರ್ನಾಟಕ ಹಾಗೂ ಎಡಮಂಗಲ ಸರಕಾರಿ ಪ್ರೌಢಶಾಲೆಯ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಅ.2ರಂದು ಶಾಲೆಯಲ್ಲಿ ಆಚರಿಸಲಾಯಿತು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜನಾರ್ಧನ ಪರ್ಲ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬಳಿಕ ಅತಿಥಿಗಳು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು.ಶಾಲಾ ಮುಖ್ಯಮಂತ್ರಿ ಶ್ರೇಯಾ ಅವರು ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ಪ್ರಜಾಧ್ವನಿ ಕರ್ನಾಟಕದ ಸ್ಥಾಪಕ ಸದಸ್ಯ

ಎಡಮಂಗಲ ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ Read More »