ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ತನ್ವಿ ಬಿಳಿಯಾರಿಗೆ ಚಿನ್ನದ ಪದಕ

ಬೆಂಗಳೂರು: ಹರಿಯಾಣದ ಫರೀದಾಬಾದ್‌ನಲ್ಲಿ ನಡೆದ ಸಿಬಿಎಸ್‌ಇ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಬೆಂಗಳೂರಿನ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದ ಐದನೇ ತರಗತಿ ವಿದ್ಯಾರ್ಥಿನಿ ತನ್ವಿ ಬಿಳಿಯಾರು ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಸೆಪ್ಟೆಂಬರ್ 29ರಿಂದ ಅಕ್ಟೋಬರ್ 2ರವರೆಗೆ ನಾಲ್ಕು ದಿನಗಳ ಕಾಲ ನಡೆದ ಈ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತನ್ವಿ, ತಮ್ಮ ಯೋಗ ಕೌಶಲದ ಮೂಲಕ ಗಮನ ಸೆಳೆದಿದ್ದಾರೆ. ಈ ಸಾಧನೆಯೊಂದಿಗೆ ಅವರು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಜಿಎಫ್‌ಐ) ಆಯೋಜಿಸುವ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.
ಶೈಕ್ಷಣಿಕ ಹಂತದಲ್ಲೇ ರಾಷ್ಟ್ರಮಟ್ಟದಲ್ಲಿ ಮಿಂಚಿರುವ ತನ್ವಿಯ ಸಾಧನೆ ಶಾಲೆಗೆ ಮಾತ್ರವಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ಅರಂತೋಡಿನ ಬಿಳಿಯಾರು ಕುಟುಂಬಕ್ಕೂ ಹೆಮ್ಮೆ ತಂದಿದೆ.
ತನ್ವಿ ಅವರು ಅರಂತೋಡಿನ ಬಿಳಿಯಾರು ನಿವಾಸಿ ಜಯಪ್ರಕಾಶ್ ಬಿಳಿಯಾರು ಮತ್ತು ಉಷಾ ಕುಮಾರಿ ಆರಿಗ ದಂಪತಿಯ ಪುತ್ರಿ. ಬಿಳಿಯಾರಿನ ದಿವಂಗತ ಚಿನ್ನಪ್ಪ ಗೌಡ ಮತ್ತು ವಿಶಾಲಾಕ್ಷಿ ದಂಪತಿಯ ಮೊಮ್ಮಗಳಾಗಿದ್ದಾರೆ.















Leave a Comment

Your email address will not be published. Required fields are marked *

error: Content is protected !!
Scroll to Top