ಅರಂತೋಡು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ ಸುವರ್ಣ ಮಹೋತ್ಸವ ಕಛೇರಿ ಉದ್ಘಾಟನೆ

ಅರಂತೋಡು: ಬದ್ರಿಯಾ ಜುಮ್ಮಾ ಮಸೀದಿ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ (ರಿ.) ಅರಂತೋಡು ಇದರ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ, ಅರಂತೋಡಿನ ಪಟೇಲ್ ವಾಣಿಜ್ಯ ಸಂಕೀರ್ಣದಲ್ಲಿ ನೂತನ ಸುವರ್ಣ ಮಹೋತ್ಸವ ಕಚೇರಿಯ ಉದ್ಘಾಟನೆ ಕಾರ್ಯಕ್ರಮವು ಅ.3 ರಂದು ನೆರವೇರಿತು. ಉದ್ಘಾಟನೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರು (ಸಚಿವ ದರ್ಜೆ), ಎಎಚ್‌ವೈಎ ಸಂಸ್ಥೆಯ ಗೌರವಾಧ್ಯಕ್ಷರಾದ ಟಿ.ಎಂ. ಶಾಹಿದ್ ತೆಕ್ಕಿಲ್ ನೆರವೇರಿಸಿದರು.
ಉದ್ಘಾಟಿಸಿ ಮಾತನಾಡಿದ ಟಿ.ಎಂ. ಶಾಹಿದ್ ತೆಕ್ಕಿಲ್, “ಯುವಕರು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ತಮ್ಮಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಸಂಸ್ಥೆಯು ಕಳೆದ ಐದು ದಶಕಗಳಿಂದ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸಿ, ಸುವರ್ಣ ಮಹೋತ್ಸವದ ಹೊಸ್ತಿಲಿಗೆ ತಲುಪಿರುವುದು ಶ್ಲಾಘನೀಯ. ಪ್ರತಿಯೊಂದು ಜಮಾಅತ್ ವ್ಯಾಪ್ತಿಯಲ್ಲೂ ಎಸ್‌ಕೆಎಸ್‌ಎಸ್‌ಎಫ್ ಸೇರಿದಂತೆ ಇನ್ನಿತರ ಸಂಘಟನೆಗಳ ಮೂಲಕ ಯುವಜನತೆಗೆ ವ್ಯಕ್ತಿತ್ವ ವಿಕಸನ ಮತ್ತು ನಾಯಕತ್ವ ತರಬೇತಿಯ ಮಾರ್ಗದರ್ಶನ ನೀಡುವ ಅಗತ್ಯವಿದೆ ಎಂದರು. 1976ರಲ್ಲಿ ಈ ಸಂಸ್ಥೆ ಸ್ಥಾಪನೆಗೊಂಡ ಸಂದರ್ಭದಲ್ಲಿ ಸ್ಥಾಪಕ ಅಧ್ಯಕ್ಷರಾಗಿ ನನ್ನ ತಂದೆ ಟಿ.ಎಂ. ಬಾಬಾ ಹಾಜಿ ತೆಕ್ಕಿಲ್ ಹಾಗೂ ಕಾರ್ಯದರ್ಶಿಯಾಗಿ ದಿವಂಗತ ಹಾಜಿ ಅಹ್ಮದ್ ಕುಂಞ ಪಟೇಲ್ ಮತ್ತು ಅನೇಕ ಮಹನೀಯರ ತ್ಯಾಗ, ಪರಿಶ್ರಮದ ಫಲವಾಗಿ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ ಎಂದು ಅವರು ಸ್ಮರಿಸಿದರು.
ಮುಂದುವರಿದು ಮಾತನಾಡಿದ ಅವರು, ಸಂಸ್ಥೆಯ 25ನೇ ವರ್ಷದ ರಜತ ಮಹೋತ್ಸವ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಡಾ| ಎಂ. ವೀರಪ್ಪ ಮೊಯಿಲಿ, ವಿಧಾನ ಪರಿಷತ್‌ನ ಆಗಿನ ಮುಖ್ಯ ಸಚೇತಕರಾಗಿದ್ದ (ಹಾಲಿ ವಿಧಾನ ಪರಿಷತ್ ಸಭಾಪತಿ) ಸಲೀಂ ಅಹ್ಮದ್, ಕಾರ್ಮಿಕ ಮತ್ತು ಅಲ್ಪಸಂಖ್ಯಾತ ಕಲ್ಯಾಣ ವಖ್ಫ್ ಸಚಿವ ಎ.ಎಂ. ಹಿಂಡಸಗೇರಿ ಆಗಮಿಸಿದರು, ಆ ಸಮಯದಲ್ಲಿ ಜಿಲ್ಲೆ ಹಾಗೂ ಸುಳ್ಯ ತಾಲೂಕಿನ ಅತೀ ಹೆಚ್ಚು ಅನುದಾನ‌ ನೀಡಿದವರಾಗಿದ್ದರು, ರಾಜ್ಯ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಎಂ.ಎ. ಖಾಲಿದ್ ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದರು. ಅಂದಿನಿಂದ ಇಂದಿನವರೆಗೂ ಸುದೀರ್ಘ 25 ವರ್ಷಗಳ ಕಾಲ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದು, ಅನ್ವಾರುಲ್ ಹುದಾ ಸಮುದಾಯ ಭವನ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿರುವುದನ್ನು ಹೆಮ್ಮೆಯಿಂದ ಸ್ಮರಿಸಿಕೊಂಡರು.”
ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯ ಖತೀಬರಾದ ಬಹು| ಆಸಿಫ್ ಅಝ್ಹರಿ ಉಸ್ತಾದ್ ದುಆ ನೆರವೇರಿಸಿದರು. ಜಮಾಅತ್ ಅಧ್ಯಕ್ಷರಾದ ಹಾಜಿ ಅಶ್ರಫ್ ಗುಂಡಿ ಹಾಗೂ ನಿವೃತ್ತ ಉಪನ್ಯಾಸಕರಾದ ಎ. ಅಬ್ದುಲ್ಲಾ ಮಾಸ್ಟರ್ ಶುಭ ಹಾರೈಸಿ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷರಾದ ಅಮೀರ್ ಕುಕ್ಕಂಬಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಮಾರಂಭದಲ್ಲಿ ಸದರ್ ಉಸ್ತಾದ್ ರವೂಫ್ ಅಝ್ಹರಿ, ಸಹಾಯಕ ಅಧ್ಯಾಪಕ ಅಬ್ದುಲ್ ರಹ್ಮಾನ್ ಝುಹ್ರಿ, ಜಮಾಅತ್ ಉಪಾಧ್ಯಕ್ಷ ಹಾಜಿ ಕೆ.ಎಂ. ಮುಹಮ್ಮದ್, ಜಮಾಅತ್ ಕಾರ್ಯದರ್ಶಿ ಕೆ.ಎಂ. ಮೂಸಾನ್, ಕೋಶಾಧಿಕಾರಿ ಕೆ.ಎಂ. ಅಬೂಬಕ್ಕರ್ ಪರೇಕ್ಕಲ್, ಅಸೋಸಿಯೇಷನ್ ಉಪಾಧ್ಯಕ್ಷ ಹಾಜಿ ಅಝರುದ್ದೀನ್, ಪ್ರಧಾನ ಕಾರ್ಯದರ್ಶಿ ಪಸಿಲು, ಕೋಶಾಧಿಕಾರಿ ಸಂಶುದ್ದೀನ್ ಪೆಲ್ತಡ್ಕ, ಕಟ್ಟಡ ಮಾಲೀಕರಾದ ಹಾಜಿ ಅಬ್ದುಲ್ ಖಾದರ್ ಪಟೇಲ್, ಮಾಜಿ ಅಧ್ಯಕ್ಷರುಗಳಾದ ಅಬ್ದುಲ್ಲಾ ಗುಂಡಿ, ಎ. ಉಮ್ಮರ್, ಎ. ಹನೀಫ್, ಝಿಕ್ರ್ ಸ್ವಲಾತ್ ಮಜ್ಲಿಸ್ ಅಧ್ಯಕ್ಷ ಕೆ.ಎಸ್. ಇಬ್ರಾಹಿಂ ಕುಕ್ಕಂಬಳ, ಎಸ್‌‌ಕೆಎಸ್‌ಎಸ್‌ಎಫ್ ಕ್ಲಸ್ಟರ್ ಅಧ್ಯಕ್ಷ ಸಂಶುದ್ದೀನ್ ಕ್ಯೂರ್, ಕೆ.ಎಂ. ಮೊಯ್ದು ಕುಕ್ಕಂಬಳ, ಕೆ.ಎಂ. ಉಸ್ಮಾನ್, ಟಿ.ಎಂ. ಜಾವೇದ್ ತೆಕ್ಕಿಲ್, ಮುಜೀಬ್ ಅರಂತೋಡು, ಅಬ್ದುಲ್ ರಝಾಕ್ ಅಡಿಮರಡ್ಕ, ರಫೀಕ್ ಸೆಂಟ್ಯಾರ್ ಮೊದಲಾದವರು ಉಪಸ್ಥಿತರಿದ್ದರು.















Leave a Comment

Your email address will not be published. Required fields are marked *

error: Content is protected !!
Scroll to Top