ಸಂಪಾಜೆ: ಗ್ರಾಮದ ವಿವಿಧ ಭಾಗಗಳ ರಸ್ತೆ ಅಭಿವೃದ್ಧಿಗೆ ಒಟ್ಟು 35.50 ಲಕ್ಷ ರೂ. ಅನುದಾನದಲ್ಲಿ ಕೈಗೆತ್ತಿಕೊಳ್ಳಲಾದ ನಾಲ್ಕು ರಸ್ತೆ ಕಾಮಗಾರಿಗಳಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಅ. 10ರಂದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ, ಸಂಪಾಜೆ–ಕಲ್ಲುಗುಂಡಿ ಭಾಗದ ಬಹುಕಾಲದ ಬೇಡಿಕೆಯಾದ ರಸ್ತೆ ಅಭಿವೃದ್ಧಿ ಸೇರಿದಂತೆ ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳು ಹಂತ ಹಂತವಾಗಿ ಸಾಕಾರಗೊಳ್ಳಲಿವೆ. ಗ್ರಾಮಗಳ ಮೂಲಸೌಕರ್ಯವನ್ನು ಬಲಪಡಿಸಿ ಜನರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಆರಂಭಗೊಂಡಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಸ್ತೆ ಕಾಮಗಾರಿ ಆರಂಭದಿಂದ ಪೂರ್ಣಗೊಳ್ಳುವವರೆಗೆ ಸಂಬಂಧಪಟ್ಟವರು ಹಾಗೂ ರಸ್ತೆಯ ಫಲಾನುಭವಿಗಳು ಕಾಮಗಾರಿಯ ಗುಣಮಟ್ಟವನ್ನು ಗಮನಿಸಬೇಕು. ಮುಂದಿನ ದಿನಗಳಲ್ಲಿಯೂ ಗ್ರಾಮದ ಅಭಿವೃದ್ಧಿಗಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ತರುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ನಾಲ್ಕು ರಸ್ತೆಗಳಿಗೆ ಅನುದಾನ
ಸಂಪಾಜೆ ಗ್ರಾಮದ ಗೂನಡ್ಕ ಬೈಲೆ–ಬಸಲೆ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ., ನೆಲ್ಲಿಕುಮೇರಿ ಮೇಲೆ–ಕೀಲಾರು ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ., ಬಾಚಿಗದ್ದೆ–ಕೋಡಿಕೈಪಡ್ಕ ರಸ್ತೆ ಅಭಿವೃದ್ಧಿಗೆ 5.50 ಲಕ್ಷ ರೂ. ಹಾಗೂ ಕಲ್ಲುಗುಂಡಿ–ದಂಡೆಕಜೆ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ ಮೀಸಲಿಡಲಾಗಿದೆ. ಈ ನಾಲ್ಕು ಕಾಮಗಾರಿಗಳಿಗೆ ಒಟ್ಟು 35.50 ಲಕ್ಷ ರೂ. ವೆಚ್ಚವಾಗಲಿದೆ.
ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗಿ
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಮಂಡಲ ನಿಕಟಪೂರ್ವ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ಕಾರ್ಯದರ್ಶಿ ಸುರೇಶ್ ನಾಯ್ಕ, ಹಿರಿಯರಾದ ಜಗದೀಶ್ ಕೆ.ಪಿ., ಗಣಪತಿ ಭಟ್, ಮಂಡಲ ಸಮಿತಿ ಕಾರ್ಯದರ್ಶಿ ಭಾರತಿ ಪುರುಷೋತ್ತಮ ಉಳುವಾರು, ಯಶೋಧ ಲೋಕನಾಥ್, ಸಂಪಾಜೆ ಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್ ಪೇರಾಲು, ಪ್ರಕಾಶ್ ಕೆ.ಪಿ., ಪುನೀತ್ ದೊಡ್ಡಡ್ಕ, ರಾಘವ ಅಬೀರ, ಮನೋಜ್ ಜಿ.ಎಸ್. ಗೂನಡ್ಕ, ಶಾಜಿ ಮಾಧವನ್, ಚಂದ್ರಶೇಖರ ಕೈಪಡ್ಕ, ನಾಗೇಶ್ ಕುಯಿಂತೋಡು, ಮಾಜಿ ಗ್ರಾ.ಪಂ. ಸದಸ್ಯೆ ರಜನಿ ಶರತ್, ರಮ್ಯ ಕೆ.ಆರ್., ಚಂದ್ರಕಲಾ, ಸುನಿತಾ, ಲೋಕೇಶ್ ಬಾಚಿಗದ್ದೆ, ಅಭಿಷೇಕ್ ಕೈಪಡ್ಕ, ಮಿಥುನ್, ಸಚಿನ್ ಕೀಲಾರು, ಯಶವಂತ ಸೇರಿದಂತೆ ಕಾರ್ಯಕರ್ತರು ಹಾಗೂ ರಸ್ತೆ ಫಲಾನುಭವಿಗಳು ಉಪಸ್ಥಿತರಿದ್ದರು.
ಸಂಪಾಜೆ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ











