ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾದೇವಿಯ ಸನ್ನಿಧಿಯಲ್ಲಿ ಅ.11ರಿಂದ ನವರಾತ್ರಿ ಪೂಜೆ ಆರಂಭಗೊಳ್ಳಲಿದೆ.
ನವರಾತ್ರಿಯ ಆರಂಭದ ದಿನವಾದ ನಾಳೆ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ, ನಾಗತೀರ್ಥ ಇವರಿಂದ ಭಜನಾ ಸೇವೆ ಹಾಗೂ ನೆಕ್ಕಿಲದ ಕು. ಸ್ತುತಿ ಆರ್. ಭಟ್ ಅವರಿಂದ ಭಕ್ತಿಗಾನ ಕಾರ್ಯಕ್ರಮ ನಡೆಯಲಿದೆ.
ಪ್ರತಿದಿನ ರಾತ್ರಿ 8 ಗಂಟೆಗೆ ನವರಾತ್ರಿ ಪೂಜೆ ನೆರವೇರಲಿದ್ದು, ಪ್ರತಿದಿನ ಭಕ್ತಾದಿಗಳಿಗೆ ಅನ್ನಪ್ರಸಾದ ಭೋಜನದ ವ್ಯವಸ್ಥೆ ಮಾಡಲಾಗಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದು, ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು ವಿನಂತಿಸಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆಯಿಂದ ನವರಾತ್ರಿ ಪೂಜೆ ಆರಂಭ











