ಇಂದಿನಿಂದ ರಾಜ್ಯಾದ್ಯಂತ ‘ಅನ್ನಸೇವೆ’ ಆ್ಯಪ್ ಲಭ್ಯ: ಮನೆಯಲ್ಲೇ ಕುಳಿತು ಪಡಿತರ ಚೀಟಿಯ ಇ-ಕೆವೈಸಿ ಮಾಡಿಕೊಳ್ಳಲು ಅವಕಾಶ
ಬೆಂಗಳೂರು: ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸುವ ಉದ್ದೇಶದಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ‘ಅನ್ನಸೇವೆ’ ಮೊಬೈಲ್ ಆ್ಯಪ್ ಸೇವೆಯನ್ನು ಅಕ್ಟೋಬರ್ 10ರಿಂದ ರಾಜ್ಯಾದ್ಯಂತ ವಿಸ್ತರಿಸಿದೆ. ಇದರಿಂದ ಅನ್ನಭಾಗ್ಯ ಸೇರಿದಂತೆ ವಿವಿಧ ಸಾರ್ವಜನಿಕ ವಿತರಣಾ ಯೋಜನೆಗಳ ಫಲಾನುಭವಿಗಳು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡದೆಯೇ ತಮ್ಮ ಮೊಬೈಲ್ ಮೂಲಕವೇ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶ ದೊರೆಯಲಿದೆ.ಈ ಮೊದಲು ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಯಲ್ಲಿದ್ದ ಈ ಸೇವೆಯನ್ನು ಇದೀಗ ಉಳಿದ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ.

