ಕೊಚ್ಚಿನ್‌ನಲ್ಲಿ ರಸ್ತೆ ಅಪಘಾತ: ಸುಳ್ಯ ಮೂಲದ ಯುವಕ ಸಾವು

ಸುಳ್ಯ: ಕೇರಳದ ಕೊಚ್ಚಿನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಯುವಕನೊಬ್ಬ ಮೃತಪಟ್ಟಿದ್ದಾರೆ.
ಮೃತರನ್ನು ಕನಕಮಜಲು ಗ್ರಾಮದ ಪೆಲ್ತಡ್ಕ ನಿವಾಸಿ ಇಬ್ರಾಹಿಂ ಪಿ.ಎ. ಅವರ ಪುತ್ರ ಇಯಾಸ್ ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಇಯಾಸ್ ಅವರು ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದಾಗಿ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ



















Leave a Comment

Your email address will not be published. Required fields are marked *

error: Content is protected !!
Scroll to Top